ಮಡಿಕೇರಿ: 29 ಕಟ್ಟಡ ಕಾರ್ಮಿಕರಿಗೆ ಕೊರೋನಾ ಪಾಸಿಟಿವ್

Prasthutha|

ಮಡಿಕೇರಿ: ರಾಜಾಸೀಟ್ ರಸ್ತೆಯಲ್ಲಿರುವ ಖಾಸಗಿ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಾಂಡ್, ಅಸ್ಸಾಂ ಮೂಲಕ 29 ಕಟ್ಟಡ ಕಾರ್ಮಿಕರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

- Advertisement -

ಕಳೆದ ಎರಡು ದಿನಗಳಿಂದ ಆರೋಗ್ಯ ಸಮಸ್ಯೆ ಕಂಡು ಬಂದ ಹಿನ್ನೆಲೆ ಒಟ್ಟು 150 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು, 29 ಮಂದಿಯಲ್ಲಿ ಕೋವಿಡ್ ದೃಢಪಟ್ಟಿದೆ.

ಸೋಂಕಿತರನ್ನು ಪ್ರತ್ಯೇಕ ಕೊಠಡಿಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಸ್ಥಳಕ್ಕೆ ಡಿಎಚ್‍ ಓ ಡಾ.ವೆಂಕಟೇಶ್ ಭೇಟಿ ನೀಡಿ ಕಟ್ಟಡವನ್ನು ಸೀಲ್ ಡೌನ್ ಮಾಡಲಾಗಿದೆ.

Join Whatsapp