ಕೊಡಗು: ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವೆಡೆ ಭೂಕುಸಿತ ಉಂಟಾಗುತ್ತಿದ್ದು, ರಸ್ತೆಗಳು ಹದಗೆಟ್ಟಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.
ಮಳೆಗಾಲ ಮುಗಿಯುವವರೆಗೂ ಸಂಚಾರಕ್ಕೆ ನಿರ್ಬಂಧ ಹೇರಲಾಗಿದ್ದು, 16,200 ಕೆ.ಜಿ ಗಿಂತ ಹೆಚ್ಚಿನ ಸರಕು ಸಾಗಣೆ ವಾಹನಗಳಾದ ಭಾರೀ ತೂಕದ ಮರದ ದಿಮ್ಮಿ, ಮರಳು ಸಾಗಿಸುವ ವಾಹನಗಳಿಗೆ ಅಕ್ಟೋಬರ್ 15 ರವರೆಗೆ ನಿಷೇಧ ಜಾರಿಗೊಳಿಸಿ ಆದೇಶ ಹೊರಡಿಸಿದೆ.
ಘನ ವಾಹನ ಸಂಚಾರದಿಂದ ರಸ್ತೆಗೆ ಅಪಾಯ ಸಾಧ್ಯತೆ ಇದ್ದು, ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಠಿಯಿಂದ ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್ ಆದೇಶ ಹೊರಡಿಸಿದ್ದಾರೆ.
ಅಡುಗೆ ಅನಿಲ, ಇಂಧನ ಪೂರೈಕೆ, ಹಾಲು ಪೂರೈಕೆ, ಸರ್ಕಾರಿ ವಾಹನಗಳಿಗೆ ವಿನಾಯಿತಿ ನೀಡಲಾಗಿದ್ದು, ಬುಲೆಟ್ ಟ್ಯಾಂಕರ್, ಶಿಪ್ ಕಾರ್ಗೋ ಕಂಟೈನರ್, ಲಾಂಗ್ ಚಾಸೀಸ್(ಮಲ್ಟಿ ಆ್ಯಕ್ಸೆಲ್) ವಾಹನಗಳಿಗೆ ನಿರ್ಬಂಧ ಹೇರಲಾಗಿದೆ.