Home ಟಾಪ್ ಸುದ್ದಿಗಳು ಮಡಿಕೇರಿ | ವೃತ್ತಕ್ಕೆ ಗುದ್ದಿದ KSRTC ಬಸ್: ನೆಲಕ್ಕುರುಳಿದ ಜನರಲ್ ತಿಮ್ಮಯ್ಯ ಪ್ರತಿಮೆ

ಮಡಿಕೇರಿ | ವೃತ್ತಕ್ಕೆ ಗುದ್ದಿದ KSRTC ಬಸ್: ನೆಲಕ್ಕುರುಳಿದ ಜನರಲ್ ತಿಮ್ಮಯ್ಯ ಪ್ರತಿಮೆ

ಮಡಿಕೇರಿ: ಸೋಮವಾರ ಬೆಳ್ಳಂಬೆಳಗ್ಗೆ ಕೆಎಸ್ ಆರ್ ಟಿಸಿ ಬಸ್ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತಕ್ಕೆ ಗುದ್ದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ವೀರ ಸೇನಾನಿ ತಿಮ್ಮಯ್ಯ ಅವರ ಪ್ರತಿಮೆ ನೆಲಕ್ಕುರುಳಿ ಬಿದ್ದಿದೆ.


ಮಂಜಿನ ನಗರಿ ಮಡಿಕೇರಿಗೆ ಕಳಸದಂತೆ ಇದ್ದ ವೀರ ಸೇನಾನಿ ಜನರಲ್ ತಿಮ್ಮಯ್ಯ ಪ್ರತಿಮೆಗೆ ನಿಯಂತ್ರಣ ಕಳೆದುಕೊಂಡ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಮಹಾನ್ ಸೇನಾನಿ ಪ್ರತಿಮೆ ನೆಲಕ್ಕುರುಳಿದೆ.


ಮಡಿಕೇರಿ ಡಿಪೋದಿಂದ ಬಸ್ ನಿಲ್ದಾಣದ ಕಡೆ ಹೊರಟಿದ್ದ ಬಸ್ ಗೆ ಪಿಕಪ್ ವಾಹನವೊಂದು ಅಡ್ಡ ಬಂದಿದ್ದು, ಅಪಘಾತ ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡ ಬಸ್ ಚಾಲಕ ಜನರಲ್ ತಿಮ್ಮಯ್ಯ ಪ್ರತಿಮೆಗೆ ಡಿಕ್ಕಿ ಹೊಡೆದಿದ್ದಾನೆ.


ಅದೃಷ್ಟವಶಾತ್ ಬಸ್ ನಲ್ಲಿ ಪ್ರಯಾಣಿಕರಿಲ್ಲದ್ದರಿಂದ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕ ಹಾಗೂ ಕಾರ್ಯನಿರ್ವಾಹಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು, ಬಸ್ ಚಾಲಕ ಕೊಟ್ರೇಶ್ ನನ್ನು ವಶಕ್ಕೆ ಪಡೆದಿದ್ದಾರೆ.

Join Whatsapp
Exit mobile version