ಮಡಿಕೇರಿ – ಮಂಗಳೂರು ರಸ್ತೆ ಲಘು ವಾಹನ ಸಂಚಾರಕ್ಕೆ ಮುಕ್ತ

Prasthutha|

ಕೊಡಗು: ಜಿಲ್ಲಾಡಳಿತ ಭವನದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಘು ವಾಹನಗಳು ದ್ವಿಮುಖವಾಗಿ ಸಂಚರಿಸಲು ಅನುವು ಮಾಡಿಕೊಡಲಾಗಿದೆ.

- Advertisement -

7+1 ಸೀಟರ್ ಗಿಂತ ಹೆಚ್ಚಿನ ಸಾಮರ್ಥ್ಯದ 4 ಚಕ್ರ ವಾಹನಗಳು ಮಂಗಳೂರು ಕಡೆಗೆ ಮತ್ತುಮಂಗಳೂರಿನಿಂದ ಮಡಿಕೇರಿ ಕಡೆಗೆ ಸಂಪಾಜೆ – ತಾಳತ್ತಮನೆ- ಮೇಕೇರಿ ಮಾರ್ಗವಾಗಿ ಏಕಮುಖವಾಗಿ ಸಂಚರಿಸಬಹುದಾಗಿದೆ.

16.2 ಟನ್ ಒಳಪಟ್ಟ ಸರಕು ಸಾಗಣೆ ವಾಹನಗಳು, ಖಾಸಗಿ ಮತ್ತು ಕೆ ಎಸ್ ಆರ್ ಟಿಸಿ ಬಸ್ ಗಳು, ಅನಿಲ, ರಸಗೊಬ್ಬರ ಹಾಗೂ ಇಂಧನ ಸಾಗಣೆ ವಾಹನಗಳು ಎರಡೂ ರಸ್ತೆಗಳಲ್ಲಿ ಏಕಮುಖ ಸಂಚಾರ ಮಾಡಬಹುದಾಗಿದೆ.



Join Whatsapp