ಮಡಿಕೇರಿ – ಮಂಗಳೂರು ಸಂಚಾರಕ್ಕೆ ಅವಕಾಶ

Prasthutha|

ಮಡಿಕೇರಿ: ಬರೆ ಕುಸಿತದಿಂದ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದ ಮಡಿಕೇರಿ – ಮಂಗಳೂರು ಸಂಚಾರಕ್ಕೆ ಮುಕ್ತ ಅವಕಾಶ ಕಲ್ಪಿಸಿರುವುದಾಗಿ ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್ ಆದೇಶ ಹೊರಡಿಸಿದ್ದಾರೆ.

ಮದೆನಾಡು ಬಳಿ ಭೂಕುಸಿತ ಉಂಟಾಗಿದ್ದ ಸ್ಥಳದಲ್ಲಿ ಶೇ. 75 ರಷ್ಟು ಮಣ್ಣು ತೆರವುಗೊಳಿಸಲಾಗಿದ್ದು, ಉಳಿಕೆ ಮಣ್ಣಿನ ತೆರವು ಕಾಮಗಾರಿ ಕೈಗೊಳ್ಳಲಾಗಿದ್ದು ಯಾವುದೇ ಸಮಸ್ಯೆ ಕಂಡುಬಂದಿರುವುದಿಲ್ಲ. ಹೀಗಾಗಿ ಇಂದಿನಿಂದಲೇ ಜಾರಿಗೆ ಬರುವಂತೆ ರಾತ್ರಿ ಕೂಡ ಮಡಿಕೇರಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

- Advertisement -

ಮಡಿಕೇರಿ – ಮಂಗಳೂರು ಹೆದ್ದಾರಿಯಲ್ಲಿ ಹಗಲು ರಾತ್ರಿ ವಾಹನ ಸಂಚಾರಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ.

- Advertisement -