ಮಡಿಕೇರಿ ನಗರಸಭೆ ಅಧ್ಯಕ್ಷೆಯಾಗಿ ಅನಿತಾ ಪೂವಯ್ಯ, ಉಪಾಧ್ಯಕ್ಷೆಯಾಗಿ ಸವಿತಾ ರಾಕೇಶ್ ಆಯ್ಕೆ.

Prasthutha|

ಮಡಿಕೇರಿ: ಇಂದು ನಡೆದ ಮಡಿಕೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಯಲ್ಲಿ ಅಧ್ಯಕ್ಷೆಯಾಗಿ ಅನಿತಾ ಪೂವಯ್ಯ, ಉಪಾಧ್ಯಕ್ಷೆಯಾಗಿ ಸವಿತಾ ರಾಕೇಶ್ ಆಯ್ಕೆಯಾಗಿದ್ದಾರೆ. ನಗರಸಭೆಯಲ್ಲಿ 16 ಸದಸ್ಯರ ಬಲ ಹೊಂದಿದ್ದ ಬಿಜೆಪಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ತನ್ನದಾಗಿಸಿದೆ.

- Advertisement -

ಸಂಪೂಣ೯ ಬಹುಮತದೊಂದಿಗೆ ಮಡಿಕೇರಿ ನಗರಸಭೆಯಲ್ಲಿ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿದಿದ್ದು, ಕಳೆದ ಅವಧಿಯಲ್ಲಿ ಸಮಬಲದಿಂದಾಗಿ ಲಾಟರಿ ಆಯ್ಕೆಯಲ್ಲಿ ಅಧ್ಯಕ್ಷ ಸ್ಥಾನ ಕಳೆದುಕೊಂಡಿದ್ದ ಅನಿತಾ ಪೂವಯ್ಯ ಈ ಬಾರಿ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.

ಉಪವಿಭಾಗಾಧಿಕಾರಿ ಈಶ್ವರಕುಮಾರ ಖಂಡು ಸಮ್ಮುಖದಲ್ಲಿ ಚುನಾವಣಾ ಪ್ರಕ್ರಿಯೆಯು ನಡೆದಿದ್ದು , ಸಂಸದ ಪ್ರತಾಪ್ ಸಿಂಹ, ಶಾಸಕರಾದ ರಂಜನ್ ಅಪ್ಪಚ್ಚು , ಸುನೀಲ್ ಸುಬ್ರಹ್ಮಣಿ ಭಾಗವಹಿಸಿ ಬಿಜೆಪಿ ಅಭ್ಯರ್ಥಿಗಳ ಪರ ಮತ ಚಲಾಯಿಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳು ಆಯ್ಕೆಯಾಗುತ್ತಿದ್ದಂತೆಯೇ ಬಿಜೆಪಿ ಬೆಂಬಲಿಗರು ನಗರ ಸಭೆಯಲ್ಲಿ ಜೈಕಾರ ಮೊಳಗಿಸಿದ್ದಾರೆ.

Join Whatsapp