Home Uncategorized ಮಡಿಕೇರಿ ನಗರಸಭೆ ಅಧ್ಯಕ್ಷೆಯಾಗಿ ಅನಿತಾ ಪೂವಯ್ಯ, ಉಪಾಧ್ಯಕ್ಷೆಯಾಗಿ ಸವಿತಾ ರಾಕೇಶ್ ಆಯ್ಕೆ.

ಮಡಿಕೇರಿ ನಗರಸಭೆ ಅಧ್ಯಕ್ಷೆಯಾಗಿ ಅನಿತಾ ಪೂವಯ್ಯ, ಉಪಾಧ್ಯಕ್ಷೆಯಾಗಿ ಸವಿತಾ ರಾಕೇಶ್ ಆಯ್ಕೆ.

ಮಡಿಕೇರಿ: ಇಂದು ನಡೆದ ಮಡಿಕೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಯಲ್ಲಿ ಅಧ್ಯಕ್ಷೆಯಾಗಿ ಅನಿತಾ ಪೂವಯ್ಯ, ಉಪಾಧ್ಯಕ್ಷೆಯಾಗಿ ಸವಿತಾ ರಾಕೇಶ್ ಆಯ್ಕೆಯಾಗಿದ್ದಾರೆ. ನಗರಸಭೆಯಲ್ಲಿ 16 ಸದಸ್ಯರ ಬಲ ಹೊಂದಿದ್ದ ಬಿಜೆಪಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ತನ್ನದಾಗಿಸಿದೆ.

ಸಂಪೂಣ೯ ಬಹುಮತದೊಂದಿಗೆ ಮಡಿಕೇರಿ ನಗರಸಭೆಯಲ್ಲಿ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿದಿದ್ದು, ಕಳೆದ ಅವಧಿಯಲ್ಲಿ ಸಮಬಲದಿಂದಾಗಿ ಲಾಟರಿ ಆಯ್ಕೆಯಲ್ಲಿ ಅಧ್ಯಕ್ಷ ಸ್ಥಾನ ಕಳೆದುಕೊಂಡಿದ್ದ ಅನಿತಾ ಪೂವಯ್ಯ ಈ ಬಾರಿ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.

ಉಪವಿಭಾಗಾಧಿಕಾರಿ ಈಶ್ವರಕುಮಾರ ಖಂಡು ಸಮ್ಮುಖದಲ್ಲಿ ಚುನಾವಣಾ ಪ್ರಕ್ರಿಯೆಯು ನಡೆದಿದ್ದು , ಸಂಸದ ಪ್ರತಾಪ್ ಸಿಂಹ, ಶಾಸಕರಾದ ರಂಜನ್ ಅಪ್ಪಚ್ಚು , ಸುನೀಲ್ ಸುಬ್ರಹ್ಮಣಿ ಭಾಗವಹಿಸಿ ಬಿಜೆಪಿ ಅಭ್ಯರ್ಥಿಗಳ ಪರ ಮತ ಚಲಾಯಿಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳು ಆಯ್ಕೆಯಾಗುತ್ತಿದ್ದಂತೆಯೇ ಬಿಜೆಪಿ ಬೆಂಬಲಿಗರು ನಗರ ಸಭೆಯಲ್ಲಿ ಜೈಕಾರ ಮೊಳಗಿಸಿದ್ದಾರೆ.

Join Whatsapp
Exit mobile version