ಮಡಿಕೇರಿ: ಚೈಲ್ಡ್‌ ಲೈನ್‌ ತಂಡದ ಕಾರ್ಯಾಚರಣೆ; ಅಪ್ರಾಪ್ತ ಬಾಲಕಿಯ ರಕ್ಷಣೆ

Prasthutha|

ಕೊಡಗು:  ಬಾಲಕಾರ್ಮಿಕಳಾಗಿ ದುಡಿಯುತ್ತಿದ್ದ ಬಾಲಕಿಯೊಬ್ಬಳನ್ನು ವಿಶೇಷ ಮಕ್ಕಳ ಪೊಲೀಸ್‌ ಘಟಕ ಹಾಗೂ ವಿವಿಧ ಇಲಾಖೆಗಳು ಕಾರ್ಯಾಚರಣೆ ನಡೆಸಿ ರಕ್ಷಿಸಿದ ಘಟನೆ ಕುಶಾಲನಗರ ತಾಲೂಕಿನ ದೊಡ್ಡ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ.

- Advertisement -

ಮಕ್ಕಳ ಸಹಾಯವಾಣಿ(1098) ಗೆ ಬಂದ ದೂರನ್ನಾಧರಿಸಿ ಕೊಡಗು ಜಿಲ್ಲಾ ವಿಶೇಷ ಮಕ್ಕಳ ಪೊಲೀಸ್‌ ಘಟಕ, ಜಿಲ್ಲಾ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನೆ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ದೊಡ್ಡ ಬೆಟ್ಟಗೇರಿ ಗ್ರಾಮದಲ್ಲಿ ತಪಾಸಣೆ ನಡೆಸಿ ಬಾಲಕಿಯನ್ನು ರಕ್ಷಿಸಿದ್ದಾರೆ.

ಹಿರಿಯ ಕಾರ್ಮಿಕ ನಿರೀಕ್ಷಕರಾದ ಲೀನಾ, ವಿಶೇಷ ಮಕ್ಕಳ ಪೋಲಿಸ್‌ ಘಟಕದ ಸುಮತಿ, ಜಿಲ್ಲಾ ಬಾಲ ಕಾರ್ಮಿಕ ಯೋಜನ ಸೊಸೈಟಿಯ ಯೋಜನ ನಿರ್ದೇಶಕ ಆರ್‌. ಸಿರಾಜ್‌ ಅಹ್ಮದ್‌,  ಮಕ್ಕಳ ರಕ್ಷಣಾ ಘಟಕದ ಕ್ಷೇತ್ರ ಕಾರ್ಯಕರ್ತರಾದ ಅಬ್ದುಲ್‌ ನಿಸಾರ್‌,  ಚೈಲ್ಡ್‌ ಲೈನ್‌ ತಂಡದ ಸದಸ್ಯರಾದ ಶೋಭಲಕ್ಷ್ಮೀ ಹಾಗೂ ಪ್ರವೀಣ್‌ ಕುಮಾರ್‌ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

- Advertisement -

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ ಅವರು ತಂಡದ ಕಾರ್ಯವನ್ನು ಶ್ಲಾಘಿಸಿದರು. ಜಿಲ್ಲೆಯಲ್ಲಿ ಮಕ್ಕಳು ಬಾಲಕಾರ್ಮಿಕರಾಗಿ ದುಡಿಯುತ್ತಿರುವ ಪ್ರಕರಣಗಳು ಬೆಳಕಿಗೆ ಬಂದರೆ ಚೈಲ್ಡ್‌ ಲೈನ್‌ 1098 (ಮಕ್ಕಳ ಸಹಾಯವಾಣಿ) ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಹೇಳಿದರು.

Join Whatsapp