ಮಡಿಕೇರಿ: ಅಕಾಲಿಕ ಮಳೆಯಿಂದ ಬೆಳೆಹಾನಿ ಪ್ರದೇಶಗಳಿಗೆ ಆರ್.ಅಶೋಕ್ ಭೇಟಿ, ಪರಿಶೀಲನೆ

Prasthutha|

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದ ಬೆಳೆ ಹಾನಿಯಾಗಿರುವ ಪ್ರದೇಶಗಳಿಗೆ ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಿ ಪರಿಶೀಲಿಸಿದರು.

- Advertisement -


ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರೂರು ಗ್ರಾಮದಲ್ಲಿ ಮುಸುಕಿನ ಜೋಳ ಮತ್ತು ಸುಂಟಿ ಬೆಳೆ ಹಾನಿಯಾಗಿರುವುದನ್ನು ವೀಕ್ಷಿಸಿದರು. ಬಳಿಕ ಕುಶಾಲನಗರದಲ್ಲಿ ಕಂದಾಯ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದರು.
ನಂತರ ಸುದ್ದಿಗಾರರ ಜೊತೆ ಮಾತನಾಡಿದ ಆರ್.ಅಶೋಕ್, ರಾಜ್ಯದಲ್ಲಿ ಅಕಾಲಿಕ ಮಳೆಯಾಗಿ ಬೆಳೆ ಹಾನಿ ಆಗಿರುವುದರಿಂದ ಚುನಾವಣಾ ಆಯೋಗವು ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಅನುಮತಿ ನೀಡಿದೆ. ಆ ನಿಟ್ಟಿನಲ್ಲಿ ಕೊಡಗು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭೇಟಿ ನೀಡಿ ವೀಕ್ಷಣೆ ಮಾಡಲಾಗುತ್ತಿದೆ ಎಂದರು.


ಅಕಾಲಿಕ ಮಳೆಯಿಂದಾಗಿ ಹೆಬ್ಬಾಲೆ ಗ್ರಾ.ಪಂ.ವ್ಯಾಪ್ತಿಯ ಮರೂರು ಗ್ರಾಮದಲ್ಲಿ ಮುಸುಕಿನ ಜೋಳ ಮತ್ತು ಶುಂಟಿ ಬೆಳೆ ಹಾನಿಯಾಗಿದೆ. ಮುಸುಕಿನ ಜೋಳ ಹೆಚ್ಚಿನ ಮಳೆಯಿಂದಾಗಿ ಮೊಳಕೆ ಬರುತ್ತಿದೆ. ಹಾಗೆಯೇ ಶುಂಟಿ ಬೆಳೆ ಕೊಳೆಯುತ್ತಿದೆ. ಆದ್ದರಿಂದ ಕೂಡಲೇ ೧೫ ದಿನದೊಳಗೆ ಬೆಳೆ ಹಾನಿಯಾದ ಕೃಷಿಕರಿಗೆ ಪರಿಹಾರ ವಿತರಿಸಲು ನಿರ್ದೇಶನ ನೀಡಲಾಗಿದೆ ಎಂದು ಕಂದಾಯ ಸಚಿವರು ಹೇಳಿದರು.

- Advertisement -


ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಭಾರಿ ಮಳೆಯಿಂದಾಗಿ 146 ಮನೆಗಳು ಹಾನಿಯಾಗಿದೆ. 40.878 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ, 22 ಜಾನುವಾರುಗಳ ಪ್ರಾಣ ಹಾನಿ, 10 ಜಾನುವಾರು ಕೊಟ್ಟಿಗೆ ಹಾನಿ ಹಾಗೂ 127 ಕೋಟಿ ರೂ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಉಂಟಾಗಿತ್ತು. ಈಗಾಗಲೇ ಹಲವು ಹಾನಿ ಪ್ರಕರಣಕ್ಕೆ ಎನ್ಡಿ ಆರ್ಎ ಫ್ ಮಾರ್ಗಸೂಚಿಯಂತೆ ಪರಿಹಾರ ವಿತರಿಸಲಾಗಿದೆ. ಸದ್ಯ ಅಕಾಲಿಕ ಮಳೆಯಿಂದ ಹಾನಿಯಾಗಿರುವ ಬೆಳೆ ಹಾನಿಗೆ ಪರಿಹಾರ ಭರಿಸಲಾಗುವುದು ಎಂದು ಕಂದಾಯ ಸಚಿವರಾದ ಆರ್.ಅಶೋಕ್ ತಿಳಿಸಿದರು.

Join Whatsapp