ಮಡಿಕೇರಿ: ಬಿಸಿಲ ಬೇಗೆಗೆ ತಂಪೆರೆದ ಮಳೆ

Prasthutha|

ಮಡಿಕೇರಿ: ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಇಳೆಗೆ ಮಳೆಯ ಸಿಂಚನವಾಗಿದೆ. ಕೊಡಗು ಜಿಲ್ಲೆಯ ನಾಪೊಕ್ಲು ಎಂಬಲ್ಲಿ ಇಂದು ಸುಮಾರು 1 ಗಂಟೆ ಕಾಲ ಸಾಧಾರಣ ಮಳೆಯಾಗಿದೆ.

- Advertisement -

ಅನಿರೀಕ್ಷಿತವಾಗಿ ಮಳೆ ಸುರಿದಿದ್ದರಿಂದ  ಸಾರ್ವಜನಿಕರು ತೊಂದರೆಗೊಳಗಾದರು. ಆದರೆ ಮೊದಲ ಮಳೆಯಿಂದ ರೈತ ವರ್ಗ ಹರ್ಷಗೊಂಡಿದೆ.

ಇನ್ನು ಮಾ.14 ರಿಂದ 18ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಮಳೆ ಬರಲಿದ್ದು, ಮಾ.16 ರಿಂದ 18ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆ ಆಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬಳ್ಳಾರಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಯ ಕೆಲವು ಕಡೆ ಮಾ.16 ರಿಂದ ಮಾ.18ರವರೆಗೆ ಮಳೆ ಆಗಲಿದೆ.
ಸಮುದ್ರ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆಯಿದೆ.



Join Whatsapp