Home ಟಾಪ್ ಸುದ್ದಿಗಳು ಮಡಿಕೇರಿ: 15 ವರ್ಷಗಳ ಬಳಿಕ ವಿರಾಜಪೇಟೆ ಪುರಸಭೆ ಕಾಂಗ್ರೆಸ್ ತೆಕ್ಕೆಗೆ

ಮಡಿಕೇರಿ: 15 ವರ್ಷಗಳ ಬಳಿಕ ವಿರಾಜಪೇಟೆ ಪುರಸಭೆ ಕಾಂಗ್ರೆಸ್ ತೆಕ್ಕೆಗೆ

ಅಧ್ಯಕ್ಷರಾಗಿ ದೇಚಮ್ಮ, ಉಪಾಧ್ಯಕ್ಷರಾಗಿ ಫೌಸಿಯಾ ತಬಸುಮ್ ಆಯ್ಕೆ


ವಿರಾಜಪೇಟೆ : ಪುರಸಭೆ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಸೋಮವಾರ ನಡೆದಿದ್ದು, ಅಧ್ಯಕ್ಷರಾಗಿ ದೇಚಮ್ಮ ಕಾಳಪ್ಪ ಮತ್ತು ಉಪಾಧ್ಯಕ್ಷರಾಗಿ ಫೌಸಿಯಾ ತಬಸುಮ್ ಆಯ್ಕೆಗೊಂಡರು.
ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಬೊಪ್ಪಂಡ ಸುನಿತಾ ಜೂನಾ, ಉಪಾಧ್ಯಕ್ಷ ಸ್ಥಾನಕ್ಕೆ ಬೋವಿರಿಯಂಡ ಆಶಾ ಸುಬ್ಬಯ್ಯ ಅವರು ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್ ನಿಂದ ದೇಚಮ್ಮ ಕಾಳಪ್ಪ ಹಾಗೂ ಫೌಸಿಯಾ ತಬಸುಮ್ ನಾಮಪತ್ರ ಸಲ್ಲಿಸಿದರು.

ಶಾಸಕರು, ಸಂಸದರು, ಮತ್ತು ವಿಧಾನ ಪರಿಷತ್ ಸದಸ್ಯರು ಸೇರಿದಂತೆ ವಿರಾಜಪೇಟೆ ಪುರಸಭೆಯ 18 ವಾರ್ಡ್ ಗಳ ಚುನಾಯಿತ ಪ್ರತಿನಿಧಿಗಳಿಂದ ಒಟ್ಟು 21 ಮತಗಳು ಚುನಾವಣೆಗೆ ಆರ್ಹವಾಗಿತ್ತು.

ಮತದಾನದ ವೇಳೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಇಬ್ಬರು ನಾಮನಿರ್ದೆಶಿತ ಸದಸ್ಯರು ಮತ್ತು ಶಾಸಕರು ಸೇರಿದಂತೆ ಒಟ್ಟು 15 ಮತಗಳು ಲಭ್ಯವಾಯಿತು. ಬಿಜೆಪಿ ಅಭ್ಯರ್ಥಿಗಳ ಪರವಾಗಿ 6 ಮತಗಳು ಮಾತ್ರ ಚಲಾವಣೆಯಾದವು. ಕಾಂಗ್ರೆಸ್ ಅಭ್ಯರ್ಥಿಗಳು 9 ಮತಗಳ ಅಂತರದಿಂದ ಜಯಗಳಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎ.ಎಸ್. ಪೊನ್ನಣ್ಣ, ಸುಮಾರು 15 ವರ್ಷಗಳ ಬಳಿಕ ಕಾಂಗ್ರೆಸ್ ಆಡಳಿತ ಚುಕ್ಕಾಣಿ ಹಿಡಿದಿರುವುದು ಸಂತಸ ತಂದಿದೆ. ವಿರಾಜಪೇಟೆ ಪಟ್ಟಣ ಪಂಚಾಯಿತಿಯಿಂದ ಪುರಸಭೆಗೆ ಮೇಲ್ದರ್ಜೆಗೆ ಏರಿದೆ. ಚುನಾಯಿತ ಜನಪತ್ರಿನಿಧಿಗಳು ವಿರಾಜಪೇಟೆ ನಗರದ ಅಭಿವೃದ್ಧಿಗೆ ಒತ್ತು ನೀಡಿ ತನ್ನ ಕರ್ತವ್ಯ ನಿರ್ವಹಿಸಬೇಕು ಎಂದು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಕಿವಿ ಮಾತು ಹೇಳಿದರು.

Join Whatsapp
Exit mobile version