ತಮಿಳುನಾಡಿನ ದೇವಸ್ಥಾನಗಳಲ್ಲಿ ಮೊಬೈಲ್ ನಿಷೇಧ: ಮದ್ರಾಸ್ ಹೈಕೋರ್ಟ್

Prasthutha|

ಚೆನ್ನೈ: ಆರಾಧನಾ ಸ್ಥಳಗಳ ಪರಿಶುದ್ಧತೆ ಮತ್ತು ಪಾವಿತ್ರ್ಯ ಕಾಪಾಡಲು ತಮಿಳುನಾಡಿನ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ಮದ್ರಾಸ್ ಹೈಕೋರ್ಟ್ ಆದೇಶ ಹೊರಡಿಸಿದೆ.

- Advertisement -

ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಸುವ ಮಂದಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಆದೇಶ ಹೊರಡಿಸಿದ್ದು, ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವ ಕ್ರಮವು ಪೂಜಾ ಸ್ಥಳಗಳ ಶುದ್ಧತೆ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವುದು ಎಂದು ನ್ಯಾಯಾಲಯ ಹೇಳಿದೆ.

ದೇವಸ್ಥಾನಗಳಿಗೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ರೀತಿ ತೊಂದರೆ ಆಗದಂತೆ ಮೊಬೈಲ್ ಫೋನ್ ಅನ್ನು ಇರಿಸುವುದಕ್ಕಾಗಿಯೇ ವಿಶೇಷವಾಗಿ ಫೋನ್ ಠೇವಣಿಯ ಲಾಕರ್ ಅನ್ನು ಸ್ಥಾಪಿಸಬೇಕು ಎಂದು ಕೋರ್ಟ್ ಸಲಹೆ ನೀಡಿದೆ.



Join Whatsapp