ಕೋವಿಡ್ ನಿರ್ವಹಣೆಯ ವೈಫಲ್ಯವನ್ನು ಪ್ರಶ್ನಿಸಿದ್ದ ನ್ಯಾಯಮೂರ್ತಿಯ ವರ್ಗಾವಣೆ| ವಕೀಲರಿಂದ ತೀವ್ರ ಪ್ರತಿಭಟನೆ

Prasthutha|

►ವರ್ಗಾವಣೆ ರದ್ದುಗೊಳಿಸುವಂತೆ ಸಿಜೆಗೆ ಪತ್ರ ಬರೆದ ವಕೀಲರ ಸಂಘ

- Advertisement -

ಹೊಸದಿಲ್ಲಿ: ಕೋವಿಡ್ ನಿಭಾಯಿಸುವಲ್ಲಿ ಕೇಂದ್ರ ಸರ್ಕಾರದ ವೈಫಲ್ಯವನ್ನು ಪ್ರಶ್ನಿಸಿದ್ದ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯ ವರ್ಗಾವಣೆಯ ವಿರುದ್ಧ ಪ್ರತಿಭಟನೆಗಳು ತೀವ್ರಗೊಂಡಿವೆ.

ನ್ಯಾಯಮೂರ್ತಿ ಸಂಜೀಬ್ ಬ್ಯಾನರ್ಜಿ ಅವರನ್ನು ಮೇಘಾಲಯ ಹೈಕೋರ್ಟ್‌ ಗೆ ವರ್ಗಾಯಿಸಲಾಗಿತ್ತು. ಈ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಕೊಲಿಜಿಯಂ ಸದಸ್ಯರಿಗೆ ವಕೀಲರು ಪತ್ರ ಬರೆದಿದ್ದಾರೆ.

- Advertisement -

ಈ ವರ್ಗಾವಣೆಯು ಭಯ ಅಥವಾ ಪಕ್ಷ ಬೇಧವಿಲ್ಲದೆ ಕಾರ್ಯನಿರ್ವಹಿಸಿದ್ದಕ್ಕಾಗಿ ನ್ಯಾಯಮೂರ್ತಿ ಬ್ಯಾನರ್ಜಿಯವರಿಗೆ ನೀಡಿದ ಶಿಕ್ಷೆಯಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಜನವರಿಯಲ್ಲಿ ಕೋಲ್ಕತ್ತಾ ಹೈಕೋರ್ಟ್‌ ನ ನ್ಯಾಯಮೂರ್ತಿ ಸಂಜೀಬ್ ಬ್ಯಾನರ್ಜಿ ಅವರನ್ನು ಮದ್ರಾಸ್ ಹೈಕೋರ್ಟ್‌ ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿತ್ತು.
ಎಂಟು ತಿಂಗಳ ನಂತರ, ಸೆಪ್ಟೆಂಬರ್ 16 ರಂದು ಬ್ಯಾನರ್ಜಿಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಕೊಲಿಜಿಯಂ ಮೇಘಾಲಯ ಹೈಕೋರ್ಟಿಗೆ ವರ್ಗಾವಣೆ ಮಾಡಿದೆ.

ಕೋವಿಡ್‌ ನ ಎರಡನೇ ಅಲೆಯಲ್ಲಿ, ಆಮ್ಲಜನಕದ ಕೊರತೆ ಮತ್ತು ಲಸಿಕೆ ಪೂರೈಕೆಯ ಅಸಮರ್ಪಕತೆಯನ್ನು ಎತ್ತಿ ತೋರಿಸಿ ನ್ಯಾಯಮೂರ್ತಿ ಬ್ಯಾನರ್ಜಿ ಕೇಂದ್ರ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದರು.
ಕೇಂದ್ರ ಸರ್ಕಾರದ ಹೊಸ ಐಟಿ ನಿಯಮಗಳು ಮಾಧ್ಯಮ ಸ್ವಾತಂತ್ರ್ಯಕ್ಕೆ ಧಕ್ಕೆ ತರುವಂತಿವೆ ಎಂದು ಮಧ್ಯಂತರ ಆದೇಶವನ್ನೂ ಹೊರಡಿಸಿದ್ದರು.

Join Whatsapp