ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಅಪರಾಧಿಗೆ ‘ವಿಶಿಷ್ಟ ಶಿಕ್ಷೆ’ ನೀಡಿದ ಮದ್ರಾಸ್ ಹೈಕೋರ್ಟ್‌

Prasthutha|

ಚೆನ್ನೈ: ಮದ್ಯಪಾನ‌ ಮಾಡಿ ವಾಹನ ಚಲಾಯಿಸಿ ಮೂವರು ಪಾದಚಾರಿಗಳನ್ನ ಗಾಯಗೊಳಿಸಿದ ವ್ಯಕ್ತಿಯೊಬ್ಬನಿಗೆ, ನಗರದ ಜನನಿಬಿಡ ಜಂಕ್ಷನ್‌ನಲ್ಲಿ ಎರಡು ವಾರಗಳ ಕಾಲ ಕುಡಿದು ವಾಹನ ಚಲಾಯಿಸುವುದರ ವಿರುದ್ಧ ಜಾಗೃತಿ ಮೂಡಿಸುವ ಕರಪತ್ರಗಳನ್ನು ಹಂಚಬೇಕು ಎಂದು ಮದ್ರಾಸ್ ಹೈಕೋರ್ಟ್ ಆದೇಶಿಸಿದೆ.

- Advertisement -

ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ಮೂವರು ಪಾದಚಾರಿಗಳನ್ನು ಗಾಯಗೊಳಿಸಿದ ಆರೋಪದ ಮೇಲೆ ಬಂಧಿತನಾಗಿದ್ದ ಯುವಕನಿಗೆ ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ ನ್ಯಾಯಮೂರ್ತಿ ಎ ಡಿ ಜಗದೀಶ್ ಚಂದ್ರ ಅವರು ಈ ನಿರ್ದೇಶನ ನೀಡಿದ್ದಾರೆ.

25,000 ರೂ. ಬಾಂಡ್ ಮತ್ತು ಇಬ್ಬರು ಶ್ಯೂರಿಟಿ ಮತ್ತಿತರ ಷರತ್ತಿನೊಂದಿಗೆ ನ್ಯಾಯಾಲಯವು ಜಾಮೀನು ನೀಡಿದ್ದು, ಅರ್ಜಿದಾರರು ಎರಡು ವಾರಗಳ ಕಾಲ ಪ್ರತಿದಿನ ಅಡ್ಯಾರ್ ಪೊಲೀಸ್ ಠಾಣೆಗೆ ಹಾಜರಾಗಬೇಕು ಮತ್ತು ಬೆಳಿಗ್ಗೆ 9-10 ಮತ್ತು ಸಂಜೆ 5-7 ರವರೆಗೆ ಕರಪತ್ರಗಳನ್ನು ಹಂಚಬೇಕು. ಅಲ್ಲದೇ ಅಗತ್ಯವಿರುವಾಗ ಪೊಲೀಸರ ಮುಂದೆ ವರದಿ ಮಾಡಬೇಕು ಎಂದು ಹೇಳಿದೆ.

Join Whatsapp