ಶೋಭಾ ಕರಂದ್ಲಾಜೆ ವಿರುದ್ಧದ ತನಿಖೆಗೆ ತಡೆ ನೀಡಲು ಮದ್ರಾಸ್ ಹೈಕೋರ್ಟ್ ನಕಾರ

Prasthutha|

ಚೆನ್ನೈ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದಲ್ಲಿ ತಮಿಳರನ್ನು ನಂಟುಮಾಡುವ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧದ ತನಿಖೆಗೆ ತಡೆ ನೀಡಲು ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಜಿ.ಜಯಚಂದ್ರನ್ ನಿರಾಕರಿಸಿದ್ದಾರೆ.

- Advertisement -

ತನಿಖೆಗೆ ತಡೆ ನೀಡಲು ನಿರಾಕರಿಸಿದ ನ್ಯಾಯಾಧೀಶರು ಪ್ರಾಸಿಕ್ಯೂಷನ್ ಗೆ ನೋಟಿಸ್ ನೀಡಿ ಪ್ರಕರಣದ ದಾಖಲೆಗಳನ್ನು ಕೋರಿದರು.

ಲೋಕಸಭಾ ಚುನಾವಣೆಗೂ ಮುನ್ನ ತಮಿಳುನಾಡಿನ ಜನರು ಬೆಂಗಳೂರಿನ ಕೆಫೆಯಲ್ಲಿ ಬಾಂಬ್ ಇಟ್ಟಿದ್ದಾರೆ ಎಂದು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಆರೋಪಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಲ್ಲಿ ಚುನಾವಣಾ ರ್ಯಾಲಿಗಳನ್ನುದ್ದೇಶಿಸಿ ಮಾತನಾಡಿದ ದಿನವೇ ಅವರ ಹೇಳಿಕೆ ಬಂದಿದೆ.

- Advertisement -

ಭಾರಿ ವಿರೋಧದ ನಂತರ, ಶೋಭಾ ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಂಡರು ಮತ್ತು ಕ್ಷಮೆಯಾಚಿಸಿದ್ದರು.

ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ರಾಜ್ಯದ ಜನರನ್ನು ಹೇಳಿಕೆಗಾಗಿ ಶೋಭಾ ವಿರುದ್ದ ಮಧುರೈ ಪೊಲೀಸರು ಪ್ರಕರಣ ದಾಖಲಿಸಿದ್ದರು.



Join Whatsapp