ಬೆಂಗಳೂರು: ಅತ್ತಿಗುಪ್ಪೆ ಮೆಟ್ರೊ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಹಳಿಗೆ ಹಾರಿದ ಪರಿಣಾಮ, ಈ ಮಾರ್ಗದ ಮೆಟ್ರೊ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಗುರುವಾರ ಮಧ್ಯಾಹ್ನ 2.10ರ ಸುಮಾರಿಗೆ ನಿಲ್ದಾಣದಲ್ಲಿ ರೈಲಿಗೆ ಕಾಯುತ್ತಿದ್ದ ವ್ಯಕ್ತಿ, ಹಳಿಗೆ ಹಾರಿದ್ದಾರೆ.
ವ್ಯಕ್ತಿ ಮೇಲೆ ರೈಲು ಹರಿದ ಪರಿಣಾಮ ದೇಹ ಛಿದ್ರಗೊಂಡಿದೆ. ಹೀಗಾಗಿ ರೈಲು ಅಲ್ಲಿಯೇ ನಿಂತಿತ್ತು. ಮುಂಬೈ ಮೂಲದ ಧ್ರುವ್ ಟಕ್ಕರ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಬೆಂಗಳೂರಿನ ನ್ಯಾಷನಲ್ ಲಾ ಕಾಲೇಜಿನ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಇದೀಗ ಮೃತ ದೇಹವನ್ನು ಹಳಿಯಿಂದ ಹೊರ ತೆಗೆದು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಹೀಗಾಗಿ ಸ್ಥಗಿತಗೊಂಡಿದ್ದ ಮಾಗಡಿ ರಸ್ತೆ TO ಚಲ್ಲಘಟ್ಟ ಮೆಟ್ರೋ ಸಂಚಾರ ಪುನಾರಂಭವಾಗಿದೆ.