ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಇಂದು ಮುಂಬೈನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸಕ್ಕೆ ಭೇಟಿ ನೀಡಿ ನಟನ ಕುಶಲೋಪರಿ ವಿಚಾರಿಸಿದ್ದಾರೆ.
ಸಲ್ಮಾನ್ ಖಾನ್ ಹಾಗೂ ಅವರ ತಂದೆ ಸಲೀಮ್ ಖಾನ್, ರಾಜಕೀಯ ಮುಖಂಡ ಬಾಬಾ ಸಿದ್ದಿಕ್ ಮತ್ತು ಅವರ ಮಗ ಜೀಶನ್ ಸಿದ್ದಿಕ್ ಅವರೊಂದಿಗೆ ಏಕನಾಥ ಶಿಂಧೆ ಕೆಲಕಾಲ ಮಾತುಕತೆ ನಡೆಸಿದ್ದಾರೆ.
ದಾಳಿ ಬಳಿಕ ಇದೇ ಮೊದಲ ಬಾರಿಗೆ ಸಲ್ಮಾನ್ ಖಾನ್ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.