ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಎಂವಿಎ ಸರ್ಕಾರ ಪತನದ ಅಂಚಿನಲ್ಲಿದೆ. ಇದೀಗ ರಾಜಕೀಯ ಬಿಕ್ಕಟ್ಟು ತೀವ್ರಗೊಳ್ಳುತ್ತಿದ್ದಂತೆ, ಶಿವಸೇನೆ ಇಂದು ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಪ್ರಮುಖ ಸಭೆಯನ್ನು ಕರೆದಿದೆ. ಮಧ್ಯಾಹ್ನ 1 ಗಂಟೆಗೆ ಶಿವಸೇನೆ ಭವನದಲ್ಲಿ ಸಭೆ ನಡೆಯಲಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಮಹಾರಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಸಭೆಯನ್ನು ಕರೆಯಲಾಗಿದೆ ಎನ್ನಲಾಗಿದೆ. ಶುಕ್ರವಾರ ಠಾಕ್ರೆ ಶಿವಸೇನೆಯ ಜಿಲ್ಲಾ ಮುಖ್ಯಸ್ಥರ ಸಭೆ ನಡೆಸಿದ್ದರು. ಇದಾದ ಬಳಿಕ ಇಂದು ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಪ್ರಮುಖ ಸಭೆಯನ್ನು ಕರೆಯಲಾಗಿದೆ.
ಕಳೆದ ಸಭೆಯಲ್ಲಿ ಶಿವಸೇನೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಮಹಾರಾಷ್ಟ್ರ ಸಿಎಂ, ಗುವಾಹಟಿಯಲ್ಲಿರುವ ಬಂಡಾಯ ಶಾಸಕರು ಶಿವಸೇನೆಯನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.