Home ಟಾಪ್ ಸುದ್ದಿಗಳು ಮೇಕೆದಾಟು ಮಾದರಿಯಲ್ಲೇ ಕಾಂಗ್ರೆಸ್ ನಿಂದ ಮಹದಾಯಿ ಹೋರಾಟ: ಸತೀಶ ಜಾರಕಿಹೊಳಿ

ಮೇಕೆದಾಟು ಮಾದರಿಯಲ್ಲೇ ಕಾಂಗ್ರೆಸ್ ನಿಂದ ಮಹದಾಯಿ ಹೋರಾಟ: ಸತೀಶ ಜಾರಕಿಹೊಳಿ

ಬೆಳಗಾವಿ: ಮೇಕೆದಾಟು ಮಾದರಿಯಲ್ಲೇ ಕಾಂಗ್ರೆಸ್ ಮಹದಾಯಿ ಹೋರಾಟ ನಡೆಸಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕೋವಿಡ್‌ ಸೋಂಕು ಹರಡುವಿಕೆ ಕಡಿಮೆಯಾದ ಬಳಿಕ ಮೇಕೆದಾಟು ಪಾದಯಾತ್ರೆ ಮಾದರಿಯಲ್ಲಿಯೇ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಹೋರಾಟ ನಡೆಸಲಾಗುವುದು’ ಎಂದು ಹೇಳಿದ್ದಾರೆ.

ಹೋರಾಟ ಎಲ್ಲಿಂದ ಆರಂಭ ಮಾಡಬೇಕು ಎನ್ನುವುದನ್ನು ಪಕ್ಷದ ನಾಯಕರೊಂದಿಗೆ ಚರ್ಚಿಸಿ, ರೂಪುರೇಷೆ ತಯಾರಿಸಲಾಗುವುದು. ಪಾದಯಾತ್ರೆ ನಡೆಸುವುದು ನಿಶ್ಚಿತ ಎಂದು ಈ ವೇಳೆ ಅವರು ತಿಳಿಸಿದ್ದಾರೆ.

‘ಮೇಕೆದಾಟು ಜಲಾಶಯ ನಿರ್ಮಾಣದ ಬಗ್ಗೆ ಹೋರಾಟ ಆರಂಭಿಸಿ ಸರ್ಕಾರದ ಗಮನ ಸೆಳೆಯಲಾಗಿದೆ. ಆ ಹೋರಾಟ ಅರ್ಧಕ್ಕೆ ನಿಂತಿಲ್ಲ; ಯಶ್ವಸಿಯಾಗಿದೆ’ ಎಂದು ಹೇಳಿದರು.

Join Whatsapp
Exit mobile version