Home ಟಾಪ್ ಸುದ್ದಿಗಳು ಮಹದಾಯಿ ಯೋಜನೆಗೆ ಶೀಘ್ರ ಅನುಮೋದನೆ ನಿರೀಕ್ಷೆ: ಗೋವಿಂದ ಕಾರಜೋಳ

ಮಹದಾಯಿ ಯೋಜನೆಗೆ ಶೀಘ್ರ ಅನುಮೋದನೆ ನಿರೀಕ್ಷೆ: ಗೋವಿಂದ ಕಾರಜೋಳ

ನವದೆಹಲಿ: ರಾಜ್ಯದ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇಂದು ನವದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದಲ್ಲಿ ಬಾಕಿ ಇರುವ ಅನುಮೋದನೆಗಳನ್ನು ದೊರಕಿಸಿ ಕೊಡುವಂತೆ ವಿನಂತಿಸಿದರು.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ನಿವಾಸದಲ್ಲಿ ಇಂದು ಸಂಜೆ ಈ ಮಹತ್ವದ ಸಭೆ ನಡೆಯಿತು.

ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಮೇಕೆದಾಟು, ಕೃಷ್ಣ ಮೇಲ್ದಂಡೆ ಭದ್ರ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಅನುಮೋದನೆ ನೀಡುವಂತೆ ಕೋರಲಾಯಿತು.
ಭದ್ರ ಮೇಲ್ದಂಡೆ ಯೋಜನೆಯ ಪ್ರಸ್ತಾವನೆ ಹಂತದಲ್ಲಿದ್ದು ಈ ಯೋಜನೆಗೆ ಮುಂದಿನ ಕೇಂದ್ರ ಸಚಿವ ಸಂಪುಟದ ಸಭೆಯಲ್ಲಿ ಅನುಮೋದನೆ ದೊರೆಯುವ ವಿಶ್ವಾಸವಿದೆಯೆಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ್ ಹೇಳಿದರು.

ಮಹದಾಯಿ ಯೋಜನೆಯ ಅನುಮೋದನೆ ಶೀಘ್ರದಲ್ಲಿಯೇ ದೊರಕುವ ನಿರೀಕ್ಷೆ ಇದೆ ಎಂದು ಸಚಿವರು ತಿಳಿಸಿದ್ದಾರೆ.

Join Whatsapp
Exit mobile version