ಮಹಂತ ನರೇಂದ್ರ ಗಿರಿ ನಿಗೂಢ ಸಾವು| FIR ದಾಖಲಿಸಿದ ಸಿಬಿಐ

Prasthutha|

ಹೊಸದಿಲ್ಲಿ: ಅಖಿಲ ಭಾರತೀಯ ಅಖಾಡ ಪರಿಷತ್‌ ಅಧ್ಯಕ್ಷ ಮಹಂತ ನರೇಂದ್ರ ಗಿರಿ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸಿಬಿಐ FIR ದಾಖಲಿಸಿದೆ. FIRನಲ್ಲಿ ಐಪಿಸಿ ಸೆಕ್ಷನ್‌ 306 (ಆತ್ಮಹತ್ಯೆಗೆ ಕುಮ್ಮಕ್ಕು) ಉಲ್ಲೇಖಿಸಲಾಗಿದೆ.

- Advertisement -

ಸ್ವಾಮೀಜಿ ಮೃತದೇಹವು ಅಲಹಾಬಾದ್‌ನ ಬಘಂಬರಿ ಮಠದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದೊಂದು ವ್ಯವಸ್ಥಿತ ಕೊಲೆಯೆಂದು ಶಿಷ್ಯಂದಿರು ಆರೋಪಿಸಿದ್ದರು. ಮಾತ್ರವಲ್ಲ ಘಟನೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಲಾಗಿತ್ತು. ಇದಾದ ಎರಡು ದಿನಗಳ ಬಳಿಕ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು.

ಸಾಕಷ್ಟು ವಿವಾದ ಸೃಷ್ಟಿಸಿದ ಈ ಸಾವಿನ ಕುರಿತು ಕೂಲಂಕಷ ತನಿಖೆ ನಡೆಸಬೇಕೆಂದು ಪ್ರತಿಪಕ್ಷಗಳು ಆಗ್ರಹಿಸಿದ್ದವು.

Join Whatsapp