ನಾಸಿಕ್: ಕೇಂದ್ರ ಸರಕಾರದಿಂದ ನಿಷೇಧಕ್ಕೊಳಪಟ್ಟ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಸದಸ್ಯನೊಬ್ಬನನ್ನು ರಾಷ್ಟ್ರವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪದ ಮೇಲೆ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಸೋಮವಾರ ಬಂಧಿಸಿದೆ ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ.
ನಾಸಿಕ್ ಎಟಿಎಸ್ ನ FIR ಗೆ ಸಂಬಂಧಿಸಿದಂತೆ ಮೌಲಾನಾ ಇರ್ಫಾನ್ ದೌಲತ್ ನದ್ವಿ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಈವರೆಗೆ ಏಳು ಆರೋಪಿಗಳನ್ನು ಬಂಧಿಸಲಾಗಿದೆ.
ಗೃಹ ವ್ಯವಹಾರಗಳ ಸಚಿವಾಲಯವು (ಎಂಎಚ್ಎ) ಸೆಪ್ಟೆಂಬರ್ ನಲ್ಲಿ ಇತ್ತೀಚೆಗೆ ಹೊರಡಿಸಿದ ಅಧಿಸೂಚನೆಯ ಮೂಲಕ “ಪಿಎಫ್ಐ ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾನೂನುಬಾಹಿರ ಸಂಘಟನೆ” ಎಂದು ಘೋಷಿಸಿತ್ತು.