Home ಟಾಪ್ ಸುದ್ದಿಗಳು ಮಹಾರಾಷ್ಟ್ರ: ಪಿಎಫ್ಐ ಸದಸ್ಯನನ್ನು ಬಂಧಿಸಿದ ಎಟಿಎಸ್!

ಮಹಾರಾಷ್ಟ್ರ: ಪಿಎಫ್ಐ ಸದಸ್ಯನನ್ನು ಬಂಧಿಸಿದ ಎಟಿಎಸ್!

ನಾಸಿಕ್: ಕೇಂದ್ರ ಸರಕಾರದಿಂದ ನಿಷೇಧಕ್ಕೊಳಪಟ್ಟ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಸದಸ್ಯನೊಬ್ಬನನ್ನು ರಾಷ್ಟ್ರವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪದ ಮೇಲೆ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಸೋಮವಾರ ಬಂಧಿಸಿದೆ ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಾಸಿಕ್ ಎಟಿಎಸ್ ನ FIR ಗೆ ಸಂಬಂಧಿಸಿದಂತೆ ಮೌಲಾನಾ ಇರ್ಫಾನ್ ದೌಲತ್ ನದ್ವಿ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಈವರೆಗೆ ಏಳು ಆರೋಪಿಗಳನ್ನು ಬಂಧಿಸಲಾಗಿದೆ.

ಗೃಹ ವ್ಯವಹಾರಗಳ ಸಚಿವಾಲಯವು (ಎಂಎಚ್ಎ) ಸೆಪ್ಟೆಂಬರ್ ನಲ್ಲಿ ಇತ್ತೀಚೆಗೆ ಹೊರಡಿಸಿದ ಅಧಿಸೂಚನೆಯ ಮೂಲಕ “ಪಿಎಫ್ಐ ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾನೂನುಬಾಹಿರ ಸಂಘಟನೆ” ಎಂದು ಘೋಷಿಸಿತ್ತು.

Join Whatsapp
Exit mobile version