Home ಜಾಲತಾಣದಿಂದ ಬಿಸಿಲಿನ ಧಗೆ| ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಗಮಿಸಿದ್ದ 11 ಮಂದಿ ಮೃತ್ಯು!

ಬಿಸಿಲಿನ ಧಗೆ| ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಗಮಿಸಿದ್ದ 11 ಮಂದಿ ಮೃತ್ಯು!

ಮುಂಬೈ: ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಗಮಿಸಿದ್ದ 11 ಮಂದಿ ಬಿಸಿಲಿನ ತಾಪದಿಂದ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ.

ಬಿಸಿಲಿನ ಝಳದಿಂದ ಹಲವರು ಅಸ್ವಸ್ಥರಾಗಿದ್ದು, ಸುಮಾರು 50 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಹಾರಾಷ್ಟ್ರ ಸರ್ಕಾರವು ಸ್ಥಾಪಿಸಿದ ಪ್ರಶಸ್ತಿಯನ್ನು ಸಾಮಾಜಿಕ ಕಾರ್ಯಕರ್ತ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಗೃಹ ಸಚಿವ ಅಮಿತ್ ಶಾ ಪ್ರದಾನ ಮಾಡಿದರು. ಬೆಳಗ್ಗೆ 11.30ಕ್ಕೆ ಆರಂಭವಾದ ಪ್ರಶಸ್ತಿ ಪ್ರದಾನ ಸಮಾರಂಭ ಮಧ್ಯಾಹ್ನ 1ರವರೆಗೆ ನಡೆದಿತ್ತು. ಪ್ರೇಕ್ಷಕರಿಗೆ ಆಸನ ವ್ಯವಸ್ಥೆ ಇದ್ದರೂ ನೆರಳಿಗಾಗಿ ಶಾಮಿಯಾನ ಅಥವಾ ಶೀಟ್ ಹಾಕಿರಲಿಲ್ಲ ಎನ್ನಲಾಗಿದೆ.

ಈ ಘಟನೆಯನ್ನು ದುರದೃಷ್ಟಕರ ಎಂದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಮೃತರ ಕುಟುಂಬಗಳಿಗೆ ₹ 5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.

Join Whatsapp
Exit mobile version