Home ಟಾಪ್ ಸುದ್ದಿಗಳು ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ: 18 ಶಾಸಕರು ಸಚಿವರಾಗಿ ಪ್ರಮಾಣ

ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ: 18 ಶಾಸಕರು ಸಚಿವರಾಗಿ ಪ್ರಮಾಣ

ಮುಂಬೈ: ಬಹುನಿರೀಕ್ಷಿತ ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ ಮಂಗಳವಾರ ನಡೆದಿದ್ದು, ಬಿಜೆಪಿಯ ತಲಾ 9 ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣದ ತಲಾ 18 ಶಾಸಕರು ಮುಂಬೈನ ರಾಜಭವನದಲ್ಲಿ ನಡೆದ  ಸಮಾರಂಭದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು 18 ಶಾಸಕರಿಗೆ ಸಚಿವರಾಗಿ ಪ್ರಮಾಣ ವಚನ ಬೋಧಿಸಿದರು.

ರಾಜ್ಯದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಆಘಾಡಿ ಸರ್ಕಾರವನ್ನು ಉರುಳಿಸಿದ ನಂತರ ಮುಖ್ಯಮಂತ್ರಿ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಪ್ರಮಾಣ ವಚನ ಸ್ವೀಕರಿಸಿದ 40 ದಿನಗಳ ನಂತರ ಸಂಪುಟ ವಿಸ್ತರಣೆಯಾಗಿದೆ.

ಚಂದ್ರಕಾಂತ್ ಪಾಟೀಲ್, ಸುಧೀರ್ ಮುಂಗಂತಿವಾರ್, ಗಿರೀಶ್ ಮಹಾಜನ್, ಸುರೇಶ್ ಖಾಡೆ, ರಾಧಾ ಕೃಷ್ಣ ವಿಖೆ ಪಾಟೀಲ್, ರವೀಂದ್ರ ಚವ್ಹಾಣ್, ಮಂಗಲ್ ಪ್ರಭಾತ್ ಲೋಧಾ, ವಿಜಯಕುಮಾರ್ ಗವಿತ್ ಮತ್ತು ಅತುಲ್ ಸೇವ್ ಸೇರಿದಂತೆ ಬಿಜೆಪಿ ಶಾಸಕರು ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.

Join Whatsapp
Exit mobile version