ಔರಂಗಾಬಾದ್, ಉಸ್ಮಾನಾಬಾದ್ ನಗರದ ಹೆಸರು ಬದಲಿಸಿದ ಶಿಂಧೆ ಸರ್ಕಾರ

Prasthutha|

ಮುಂಬೈ: ಮಹಾರಾಷ್ಟ್ರದ ಶಿಂಧೆ ಸರ್ಕಾರ ನಗರಗಳ ಹೆಸರು ಬದಲಾವಣೆಗೆ ಮುಂದಾಗಿದ್ದು, ಔರಂಗಾಬಾದ್ ಅನ್ನು ಛತ್ರಪತಿ ಸಂಭಾಜಿ ನಗರವೆಂದೂ, ಉಸ್ಮಾನಾಬಾದ್ ನ್ನು ಧರಶಿವ ಎಂದು ಮರುನಾಮಕರಣ ಮಾಡಲು ನಿರ್ಧರಿಸಿದೆ.

- Advertisement -

ಈ ಎರಡು ನರಗರಗಳ ಹೆಸರನ್ನು ಬದಲಿಸಿ ಉದ್ಧವ್ ಠಾಕ್ರೆ ಸರ್ಕಾರ ಜೂನ್ 29 ರಂದು ಆದೇಶ ನೀಡಿತ್ತು.

ಸರ್ಕಾರ ಬಹುಮತವನ್ನು ಕಳೆದುಕೊಂಡಿದ್ದ ಕಾರಣ ಠಾಕ್ರೆ ಸರ್ಕಾರ ತೆಗೆದ ನಿರ್ಧಾರ ಕಾನೂನಿಗೆ ವಿರುದ್ಧವಾಗಿದ್ದು, ನನ್ನ ಸರ್ಕಾರ ಮರುನಾಮಕರಣ ಮಾಡಿರುವ ಕ್ರಮ ಕಾನೂನುಬದ್ಧವಾಗಿದೆ ಎಂದು ಶಿಂಧೆ ತಿಳಿಸಿದ್ದಾರೆ.

- Advertisement -

ಇದಕ್ಕೆ ಸಂಬಂಧಿಸಿದ ನೂತನ ಪ್ರಸ್ತಾವನೆಯನ್ನು ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದು ಶಿಂಧೆ ತಿಳಿಸಿದರು. ಅಲ್ಲದೆ ನವಿ ಮುಂಬೈ ವಿಮಾನ ನಿಲ್ದಾಣಕ್ಕೆ ಡಿ.ಬಿ. ಪಾಟೀಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಲು ಕೂಡ ಸರ್ಕಾರ ನಿರ್ಧರಿಸಿದೆ ಎಂದು ಅವರು ತಿಳಿಸಿದರು.

Join Whatsapp