Home ಟಾಪ್ ಸುದ್ದಿಗಳು ಮಹಾರಾಷ್ಟ್ರ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ | 10 ಮಕ್ಕಳು ಸಾವು

ಮಹಾರಾಷ್ಟ್ರ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ | 10 ಮಕ್ಕಳು ಸಾವು

ಮುಂಬೈ : ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ಜನರಲ್ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಢ ಸಂಭವಿಸಿದ್ದು, 10 ಮಕ್ಕಳು ಸಾವಿಗೀಡಾದ ಘಟನೆ ವರದಿಯಾಗಿದೆ. ಶನಿವಾರ ನಸುಕಿನ ವೇಳೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ನವಜಾತ ಶಿಶುಗಳ ವಾರ್ಡ್ ನಲ್ಲಿ ಕಾಣಿಸಿಕೊಂಡ ಬೆಂಕಿ, ಕೆಲವೇ ಕ್ಷಣಗಳಲ್ಲಿ ವಾರ್ಡ್ ಅನ್ನು ಆವರಿಸಿತು ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಘಟನೆಯಲ್ಲಿ 10 ಮಕ್ಕಳು ಸಾವಿಗೀಡಾಗಿದ್ದು, ಏಳು ಮಕ್ಕಳನ್ನು ರಕ್ಷಿಸಲಾಗಿದೆ. ಮೃತಪಟ್ಟ ಮಕ್ಕಳು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಬೆಂಕಿ ಕಾಣಿಸಿಕೊಂಡಿರುವುದಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.  

Join Whatsapp
Exit mobile version