ಮರಾಠಾ ಸಮುದಾಯವನ್ನು EWS ಕೋಟಾದಲ್ಲಿ ಸೇರಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧಾರ

Prasthutha|

ಮುಂಬೈ: ಮರಾಠಾ ಸಮುದಾಯವನ್ನು ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ನೀಡುವ EWS ಕೋಟಾದಲ್ಲಿ ಸೇರಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ. ರಾಜ್ಯ ಸರ್ಕಾರದ ಸಾರ್ವಜನಿಕ ಆಡಳಿತ ವಿಭಾಗ ಈ ಆದೇಶ ಹೊರಡಿಸಿದೆ.

- Advertisement -

ಮರಾಠಾ ಸಮುದಾಯಕ್ಕೆ ವಿಶೇಷ ಮೀಸಲಾತಿ ನೀಡುವುದನ್ನು ತಡೆದ ಸುಪ್ರೀಂ ಕೋರ್ಟ್, ಶೇ.50ಕ್ಕಿಂತ ಮೇಲೆ ಮೀಸಲಾತಿ ನೀಡುವುದು ಕಾನೂನು ಬಾಹಿರ ಎಂದು ತೀರ್ಪು ನೀಡಿತ್ತು. 2019ರಲ್ಲಿ ಕೇಂದ್ರ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿ ವರ್ಗಗಳಿಗೆ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿನ ಸೀಟುಗಳಲ್ಲಿ ಮೀಸಲಾತಿಯನ್ನು ಜಾರಿಗೆ ತಂದಿತ್ತು. ವಾರ್ಷಿಕ ಆದಾಯ 10 ಲಕ್ಷಕ್ಕಿಂತ ಕಡಿಮೆ ಇರುವವರಿಗೆ ಈ ಮೀಸಲಾತಿ ಜಾರಿಗೆ ತರಲಾಗಿತ್ತು. ಮೇಲ್ಜಾತಿಗಳಿಗೆ ಮಾತ್ರ ಈ ಮೀಸಲಾತಿ ಸಿಗುತ್ತದೆ.

ಮರಾಠ ಸಮುದಾಯವು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ನೀಡುವ EWS ಕೋಟಾದಲ್ಲಿ ಮೀಸಲಾತಿ ಪಡೆಯಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Join Whatsapp