ಮಹಾರಾಷ್ಟ್ರದಲ್ಲಿ ಭೂಕುಸಿತ: ಸಾವಿನ ಸಂಖ್ಯೆ 18ಕ್ಕೆ ಏರಿಕೆ

Prasthutha|

ಮುಂಬೈ: ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭಾರಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.

- Advertisement -


ಮೃತರು ಬುಡಕಟ್ಟು ಸಮುದಾಯಕ್ಕೆ ಸೇರಿದ್ದಾರೆ. ಅವಶೇಷಗಳಡಿ ಇನ್ನು ಹಲವರು ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಗುರುವಾರ ರಾತ್ರಿ ಮಳೆಯಿಂದಾಗಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಶುಕ್ರವಾರ ಬೆಳಗ್ಗೆಯಿಂದ ಕಾರ್ಯಾಚರಣೆ ಮುಂದುವರೆಸಲಾಗಿದ್ದು ಮಧ್ಯಾಹ್ನ ಎರಡು ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.



Join Whatsapp