Home ಟಾಪ್ ಸುದ್ದಿಗಳು ಮಹಾರಾಷ್ಟ್ರ: ಬೃಹತ್ ಐಟಿ ದಾಳಿ; 390 ಕೋಟಿ ಅಕ್ರಮ ಆಸ್ತಿ ಪತ್ತೆ

ಮಹಾರಾಷ್ಟ್ರ: ಬೃಹತ್ ಐಟಿ ದಾಳಿ; 390 ಕೋಟಿ ಅಕ್ರಮ ಆಸ್ತಿ ಪತ್ತೆ

ಮುಂಬೈ: ಮಹಾರಾಷ್ಟ್ರದ ಜಲ್ನಾದಲ್ಲಿ ವ್ಯಾಪಾರ ಗುಂಪುಗಳಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ಐಟಿ ದಾಳಿ ನಡೆಸಿದ್ದು 56 ಕೋಟಿ ನಗದು, 32 ಕೆಜಿ ಚಿನ್ನ, 16 ಕೋಟಿ ಮೌಲ್ಯದ ವಜ್ರ ಸೇರಿ ಸುಮಾರು 390 ಕೋಟಿ ಅಕ್ರಮ ಆಸ್ತಿಯನ್ನು ತೆರಿಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.


ಅಧಿಕಾರಿಗಳು ದಾಳಿಯ ವೇಳೆ ಕೆಲವು ಆಸ್ತಿ ದಾಖಲೆಗಳು ಹಾಗೂ ಡಿಜಿಟಲ್ ಡೇಟಾವನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ರಿಯಲ್ ಎಸ್ಟೇಟ್ , ಉಕ್ಕು, ಮತ್ತು ಬಟ್ಟೆ ವ್ಯವಹಾರದಲ್ಲಿ ಎರಡು ವ್ಯಾಪಾರ ಗುಂಪುಗಳಿಗೆ ಸಂಬಂಧಿಸಿದ ವಸತಿ ಮತ್ತು ಅಧಿಕೃತ ಆವರಣದಲ್ಲಿ ಆಗಸ್ಟ್ 1 ಮತ್ತು 8 ರ ನಡುವೆ ಐಟಿ ದಾಳಿ ನಡೆಸಿತ್ತು. ಇದೀಗ ಈ ದಾಳಿಯಲ್ಲಿ ವಶಕ್ಕೆ ಪಡೆಯಲಾದ ಸ್ವತ್ತುಗಳ ದತ್ತಾಂಶವನ್ನು ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಇದನ್ನು ನಿಖರವಾಗಿ ಲೆಕ್ಕ ಹಾಕಲು ಅಧಿಕಾರಿಗಳಿಗೆ ಸುಮಾರು 13 ಗಂಟೆಗಳು ಬೇಕಾಯಿತು ಎಂದು ತಿಳಿದು ಬಂದಿದೆ.


ಶೋಧ ಕಾರ್ಯಾಚರಣೆಯಲ್ಲಿ ಇಲಾಖೆಯು ರಾಜ್ಯಾದ್ಯಂತ 260 ಅಧಿಕಾರಿಗಳನ್ನು ಒಳಗೊಂಡ ಐದು ತಂಡಗಳನ್ನು ಹಾಗೂ 120 ಕ್ಕೂ ಹೆಚ್ಚು ವಾಹನಗಳನ್ನು ಬಳಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp
Exit mobile version