ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನವಾಬ್ ಮಲಿಕ್ ಅವರ ನ್ಯಾಯಾಂಗ ಬಂಧನವನ್ನು ಮುಂಬೈ ವಿಶೇಷ ನ್ಯಾಯಾಲಯ ಏಪ್ರಿಲ್ 18 ರವರೆಗೆ ವಿಸ್ತರಿಸಿದೆ.
ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆಯ ಕುರಿತ ತನಿಖೆಯಲ್ಲಿ ಎನ್.ಸಿ.ಪಿ. ಮುಖಂಡ, ಸಚಿವ ನವಾಬ್ ಮಲಿಕ್ ಅವರನ್ನು ಫೆಬ್ರವರಿ 23 ರಂದು ಇಡಿ ಅಧಿಕಾರಿಗಳು ಬಂಧಿಸಿದ್ದರು.
ಈ ಮಧ್ಯೆ ಜೈಲಿನಿಂದ ತಕ್ಷಣ ಬಿಡುಗಡೆ ಕೋರಿ ಸಲ್ಲಿಸಲಾಗಿದ್ದ ಮಧ್ಯಂತರ ಅರ್ಜಿಯನ್ನು ತಿರಸ್ಕರಿಸಿದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಮ್ ಕೋರ್ಟ್’ಗೆ ಅರ್ಜಿ ಸಲ್ಲಿಸಿದ್ದಾರೆ.
ಇಡಿ ಇಲಾಖೆಯು ಕೇಂದ್ರ ಬಿಜೆಪಿ ಸರ್ಕಾರದ ಆದೇಶದ ಮೇರೆಗೆ ಪ್ರತಿಪಕ್ಷ ನಾಯಕರಿಗೆ ಕಿರುಕುಳ ಮತ್ತು ಬೆದರಿಕೆ ಹಾಕುತ್ತಿದ್ದಾರೆ ಎಂದು ನವಾಬ್ ಮಲಿಕ್ ಆರೋಪಿಸಿದ್ದಾರೆ.