ವಾಷಿಂಗ್ಟನ್ : ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿರುವ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಹಲವು ಕಿಡಿಗೇಡಿಗಳು ಇತ್ತಿಚೆಗೆ ಧ್ವಂಸಗೊಳಿಸಿದ್ದಾರೆ. ಇದಕ್ಕೆ ಭಾರತೀಯ ಮೂಲದ ಅಮೆರಿಕನ್ನರಿಂದ ಭಾರೀ ವಿರೋಧ ವ್ಯಕ್ತವಾಗಿದ್ದು, ಈ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಉತ್ತರ ಕ್ಯಾಲಿಫೋರ್ನಿಯಾದ ಡೇವಿಸ್ ನಗರದ ಸೆಂಟ್ರಲ್ ಪಾರ್ಕ್ ನಲ್ಲಿರುವ ಗಾಂಧೀಜಿ ಅವರ 6 ಅಡಿ ಎತ್ತರದ, 294 ಕೆ.ಜಿ. ತೂಕದ ಕಂಚಿನ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದ್ದು, ಪ್ರತಿಮೆಯ ಪಾದ ಮತ್ತು ಮುಖ ಭಾಗಕ್ಕೆ ಹಾನಿಯನ್ನುಂಟು ಮಾಡಲಾಗಿದೆ ಎಂದು ಸ್ಥಳೀಯ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಸದ್ಯ ಈ ಪ್ರತಿಮೆಯನ್ನು ಅಲ್ಲಿಂದ ತೆಗೆಯಲಾಗಿದ್ದು, ಸುರಕ್ಷಿತ ಸ್ಥಳದಲ್ಲಿ ಇರಿಸಲಾಗಿದೆ ಎಂದು ಡೇವಿಸ್ ನಗರ ಸ್ಥಳೀಯ ಆಡಳಿತದ ಸದಸ್ಯ ಲೂಕಸ್ ಫ್ರೀರಿಚ್ಸ್ ಮಾಹಿತಿ ನೀಡಿದ್ದಾರೆ.