ವಿಜಯಪುರ ಮೇಯರ್ ಆಗಿ ಮಾಹೆಜಬೀನ್ ಹೊರ್ತಿ ಅಧಿಕಾರ ಸ್ವೀಕಾರ

Prasthutha|

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಎರಡೂ ಸ್ಥಾನಗಳು ಕಾಂಗ್ರೆಸ್ ಪಾಲಾಗಿದೆ. ನೂತನ ಮೇಯರ್ ಆಗಿ ಕಾಂಗ್ರೆಸ್ ನ ಮಾಹೆಜಬೀನ್ ಹೊರ್ತಿ, ಉಪ ಮೇಯರ್ ಆಗಿ ದಿನೇಶ್ ಹಳ್ಳಿ ಆಯ್ಕೆಯಾದರು.

- Advertisement -

ಅದರಂತೆ ಮಾಹೇಜಬೀನ್ ಹೊರ್ತಿ ಅವರು ಕಚೇರಿಯಲ್ಲಿ 21ನೇ ಮೇಯರ್ ಆಗಿ ಅಧಿಕಾರ ಸ್ವೀಕರಿಸಿದರು.

ಈ ವೇಳೆ ಉಪ ಮೇಯರ್ ದಿನೇಶ ಹಳ್ಳಿ, ಕಾಂಗ್ರೆಸ್ ಕಾರ್ಪೋರೇಟರ್ಸ್ ಹಾಗೂ ಇತರರು ಭಾಗಿಯಾಗಿದ್ದರು.

- Advertisement -

35 ಸದಸ್ಯರಿರುವ ಮಹಾನಗರ ಪಾಲಿಕೆಗೆ 2022ರ ಅಕ್ಟೋಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 17, ಕಾಂಗ್ರೆಸ್‌ 10, ಎಎಂಐಎಂ 2, ಜೆಡಿಎಸ್‌ 1 ಹಾಗೂ ಪಕ್ಷೇತರರು 5 ಸ್ಥಾನದಲ್ಲಿ ಗೆಲುವು ಸಾಧಿಸಿದ್ದರು. ಯಾವೊಂದು ಪಕ್ಷಕ್ಕೂ ನಿಶ್ಚಳ ಬಹುಮತ ಇಲ್ಲದೇ ಪಾಲಿಕೆ ಅತಂತ್ರವಾಗಿತ್ತು. ಬಳಿಕ ಮೇಯರ್‌, ಉಪಮೇಯರ್‌ ಸ್ಥಾನದ ಮೀಸಲಾತಿ ಪ್ರಶ್ನಿಸಿ ಕೆಲ ಸದಸ್ಯರು ಹೈಕೋರ್ಟ್‌ ಮೇಟ್ಟಿಲೇರಿದ್ದ ಕಾರಣ 14 ತಿಂಗಳಿಂದ ಚುನಾವಣೆ ನಡೆದಿರಲಿಲ್ಲ.   

ಬಳಿಕ ನಡೆದ ಚುನಾವಣೆಯಲ್ಲಿ ಎಎಂಐಎಂ, ಜೆಡಿಎಸ್‌ ಮತ್ತು ಪಕ್ಷೇತರರು ಕಾಂಗ್ರೆಸ್‌ಗೆ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಮಾಹೆಜಬೀನ್‌ ಹೊರ್ತಿ ಮೇಯರ್‌ ಆಗಿ ಆಯ್ಕೆಯಾದರು.

ಎಸ್‌ಟಿಗೆ ಮೀಸಲಾಗಿದ್ದ ಉಪಮೇಯರ್‌ ಸ್ಥಾನಕ್ಕೆ ಕಾಂಗ್ರೆಸ್‌ ಸದಸ್ಯ ದಿನೇಶ್‌ ಹಳ್ಳಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದ ಕಾರಣ ಅವಿರೋಧವಾಗಿ ಆಯ್ಕೆಯಾದರು. 



Join Whatsapp