ಸೌಜನ್ಯ ಕೊಲೆ ಪ್ರಕರಣ: ಮರುತನಿಖೆ ನಡೆಸಲು ಸಿಎಂಗೆ ಮನವಿ ಸಲ್ಲಿಸಿದ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ಹೆತ್ತವರು

Prasthutha|

ಬೆಂಗಳೂರು: ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಮಹೇಶ್ ತಿಮರೋಡಿ, ಸೌಜನ್ಯ ಹೆತ್ತವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

- Advertisement -


ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿಯವರನ್ನು ಭೇಟಿಯಾದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯ ಹೆತ್ತವರು ಮನವಿ ಸಲ್ಲಿಸಿದ್ದಾರೆ.

ಸೌಜನ್ಯ 2012ರ ಅಕ್ಟೋಬರ್ 9ರಂದು ಸಂಜೆ ಕಾಲೇಜಿನಿಂದ ಮನೆಗೆ ಬರುತ್ತಿದ್ದಾಗ ನಾಪತ್ತೆಯಾಗಿದ್ದಳು. ಮರುದಿನ ರಾತ್ರಿ ಮಣ್ಣಸಂಕ ಬಳಿ ಆಕೆಯ ಮೃತದೇಹ ಪತ್ತೆಯಾಗಿತ್ತು. ಆಕೆಯನ್ನು ಅತ್ಯಾಚಾರ ಎಸಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಈ ಪ್ರಕರಣ ಕರಾವಳಿ ಜಿಲ್ಲಾದ್ಯಂತ ಭಾರೀ ಸದ್ದು ಮಾಡಿತ್ತಲ್ಲದೇ ಜನರು ಸ್ವಯಂ ಪ್ರೇರಿತವಾಗಿ ಬೀದಿಗಳಿದು ಪ್ರತಿಭಟನೆಯನ್ನು ಮಾಡಿದ್ದರು.

- Advertisement -

ಪ್ರತಿಭಟನೆ ವೇಳೆ ಸಾಕ್ಷ್ಯನಾಶಕ್ಕೆ ಸ್ಥಳೀಯ ಪ್ರಭಾವಿ ವ್ಯಕ್ತಿಗಳು ಯತ್ನ ಮಾಡಿದ್ದಾರೆ ಎಂದು ಬಹಿರಂಗವಾಗಿಯೇ ಹೋರಾಟಗಾರರು ಆರೋಪ ಮಾಡಿದ್ದರು.

Join Whatsapp