‘ಸೌಜನ್ಯಳಿಗೆ ಆದ ಗತಿಯೇ ನಿನ್ನ ಮಗಳಿಗೆ ಆಗುತ್ತೆ’ ಎಂದ ಮಹೇಶ್ ವಿಕ್ರಮ್ ಹೆಗಡೆ: FIR ದಾಖಲು

Prasthutha|

ಬೆಂಗಳೂರು: ಕೇಂದ್ರ ಸರ್ಕಾರ ನಮ್ಮ ಕೈಯಲ್ಲಿದೆ. ಸೌಜನ್ಯಳಿಗೆ ಆದ ಗತಿಯೇ ನಿನ್ನ ಮಗಳಿಗೆ ಆಗುತ್ತೆ ಎಂಬ ರೀತಿ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.

- Advertisement -


ವಿಕ್ರಮ್ ಹೆಗಡೆ ಟಿವಿ ವಿಕ್ರಮ್ ಅಧಿಕೃತ ಪೇಜ್ ನಲ್ಲಿ ದೂರುದಾರ ಸುರೇಶ್ ಬಾಬು ಮತ್ತು ಅವರ ಮಗಳ ಬಗ್ಗೆ ಮಾನಹಾನಿಯಾಗುವ ಬಗ್ಗೆ ಕಾಮೆಂಟ್ ಮಾಡಿದ್ದಾರೆ. ಹೀಗಾಗಿ ಆರೋಪಿ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ದೂರದಾರ ಎಫ್ ಐಆರ್‌ನಲ್ಲಿ ತಿಳಿಸಿದ್ದಾರೆ.


ಸುರೇಶ್ ಬಾಬು ಅವರಿಗೆ ಕರೆ ಮಾಡಿರುವ ಮಹೇಶ್ ವಿಕ್ರಮ್ ಹೆಗಡೆ, ”ನಾವು ಸೌಜನ್ಯಳನ್ನೇ ಬಿಟ್ಟಿಲ್ಲ. ಅಂತಹ ಕಟೀಲ್ ಕೈನಲ್ಲೂ ಏನೂ ಮಾಡಲು ಆಗಿಲ್ಲ. ಇನ್ನು ನೀನು ಏನ್ ಕಿತ್ಕೊಳ್ತಿಯಾ? ಎಂದು ಬೆದರಿಕೆ ಹಾಕಿದ್ದಾನೆ” ಎಂದು ಹೇಳಲಾಗಿದೆ.



Join Whatsapp