Home ಟಾಪ್ ಸುದ್ದಿಗಳು ಹಿಜಾಬ್, ಕೇಸರಿ ಶಾಲು ವಿವಾದ: ಗೊಂದಲಕ್ಕೆ ಆಸ್ಪದ ನೀಡದೆ ಯಥಾಸ್ಥಿತಿ ಕಾಪಾಡಿ: ಶಫಿ ಸಅದಿ

ಹಿಜಾಬ್, ಕೇಸರಿ ಶಾಲು ವಿವಾದ: ಗೊಂದಲಕ್ಕೆ ಆಸ್ಪದ ನೀಡದೆ ಯಥಾಸ್ಥಿತಿ ಕಾಪಾಡಿ: ಶಫಿ ಸಅದಿ

ಬೆಂಗಳೂರು: ಹಿಜಾಬ್-ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿ ಗೊಂದಲಕ್ಕೆ ಆಸ್ಪದ ನೀಡದೇ ಯಥಾಸ್ಥಿತಿ ಕಾಪಾಡಿ ಎಂದು ರಾಜ್ಯ ಸರ್ಕಾರಕ್ಕೆ ವಕ್ಫ್​ ಬೋರ್ಡ್ ಅಧ್ಯಕ್ಷ ಶಫಿ ಸಅದಿ ಮನವಿ ಮಾಡಿದ್ದಾರೆ.

ಈ ಕುರಿತು ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ ಅವರು, ‘ಹೈಕೋರ್ಟ್​ ತೀರ್ಪು ಬರುವವರೆಗೆ ವಸ್ತ್ರ ಸಂಹಿತೆ ಪಾಲಿಸಬೇಕು. ಹಿಜಾಬ್ ಗೊಂದಲ ಶೀಘ್ರ ಪರಿಹಾರವಾಗಬೇಕು. ಮಕ್ಕಳ ಭವಿಷ್ಯಕ್ಕೆ ಇದರಿಂದ ತೊಡಕಾಗಬಾರದು. ಹೈಕೋರ್ಟ್ ಅಂತಿಮ ಆದೇಶಕ್ಕೆ ನಾವೆಲ್ಲರೂ ಬದ್ಧರಾಗಬೇಕಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದ ನೀಡದೇ ಯಥಾಸ್ಥಿತಿ ಕಾಪಾಡಬೇಕು ಎಂದು ಹೇಳಿದರು.

Join Whatsapp
Exit mobile version