ಬೋಟ್ ಪಲ್ಟಿಯಾಗಿ ಮಕ್ಕಳು, ಮಹಿಳೆಯರು ಸೇರಿದಂತೆ 11 ಜನರು ಮೃತ್ಯು

Prasthutha|

ಕೇರಳ: ಬೋಟ್ ಪಲ್ಟಿಯಾಗಿ ನಾಲ್ವರು ಮಕ್ಕಳು, ಮಹಿಳೆಯರು ಸೇರಿದಂತೆ 11 ಜನರು ಮೃತಪಟ್ಟ ದಾರುಣ ಘಟನೆ ಮಲಪ್ಪುರಂ ಜಿಲ್ಲೆಯ ತಿರೂರು ತಾಲೂಕಿನ ತಾನೂರ್​ ಬಳಿ ನಡೆದಿದೆ.

- Advertisement -

ಸುಮಾರು 30ರಿಂದ 40ಕ್ಕೂ ಹೆಚ್ಚು ಪ್ರವಾಸಿಗರಿದ್ದ ಬೋಟ್ ಇಂದು(ಭಾನುವಾರ) ಸಂಜೆ ಏಳು ಗಂಟೆಗೆ ಪಲ್ಟಿಯಾಗಿ ದುರಂತ ಸಂಭವಿಸಿದೆ.

ಏಳು ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ದುರಂತದಲ್ಲಿ ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ರಾತ್ರಿಯಾಗಿರುವುದರಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡಚಣೆ ಉಂಟಾಗುತ್ತಿದ್ದು, ಬೋಟ್ ಈಗಲೂ ನೀರಿನಡಿಯಲ್ಲೇ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

- Advertisement -

ಅಗ್ನಿಶಾಮಕ ದಳ, ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.