ಡಿ.10ರ ನಂತರ ರಾಜ್ಯ ಸಂಪುಟದಲ್ಲಿ ಭಾರೀ ಬದಲಾವಣೆ: ಯತ್ನಾಳ್ ಹೊಸ ಬಾಂಬ್

Prasthutha|

ಬೆಂಗಳೂರು: ಡಿಸೆಂಬರ್ 10ರ ಬಳಿಕ ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಯಾಗಲಿದೆ. ಆದರೆ, ಮುಖ್ಯಮಂತ್ರಿ ಬದಲಾಗುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೊಸ ರಾಜಕೀಯ ಬಾಂಬ್‌ ಸಿಡಿಸಿದ್ದಾರೆ.

- Advertisement -

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಯಾಗಲಿದ್ದು, ಕೆಲ ಸಚಿವರು ಬೆಳಗಾದರೆ ಮುಖ್ಯಮಂತ್ರಿಗಳ ಜತೆ ಓಡಾಡಿಕೊಂಡು ಇರುತ್ತಾರೆ. ಸಚಿವರು ಜಿಲ್ಲೆಗಳಿಗೆ ಹೋಗಿ ಕೆಲಸ ಮಾಡಲಿಲ್ಲವೆಂದರೆ ಮುಂದೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ತಿಳಿಸಿದರು.

ಆದರೆ, ಮುಖ್ಯಮಂತ್ರಿ ಬೊಮ್ಮಾಯಿ ಮಾತ್ರ ಯತ್ನಾಳ್‌ ಹೇಳಿಕೆ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ್ದು, ಅವರ ಮಾತಿನ ಹಿನ್ನೆಲೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.



Join Whatsapp