ಬ್ಯಾಂಕಾಕ್: ಮ್ಯಾನ್ಮಾರ್ ನಲ್ಲಿ ಇಂದು ಸಂಭವಿಸಿದ ಭೀಕರ ಭೂಕಂಪಕ್ಕೆ ಹಲವೆಡೆ ಗಗನಚುಂಬಿ ಕಟ್ಟಡಗಳು ನೆಲಸಮವಾಗಿದೆ. ಅಲ್ಲದೇ ಕನಿಷ್ಠ 43 ಕಾರ್ಮಿಕರು ನಾಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ಇಂದು ಬೆಳಗ್ಗೆ 11:50ರ ಸುಮಾರಿಗೆ 7.7 ತೀವ್ರಯ ಭೂಕಂಪ ಸಂಭವಿಸಿದೆ, ಮಧ್ಯಾಹ್ನ 12:50ರ ಸುಮಾರಿಗೆ 6.8 ತೀವ್ರತೆಯಲ್ಲಿ ಮತ್ತೊಂದು ಬಾರಿ ಭೂಕಂಪ ಸಂಭವಿಸಿದೆ. ಇದರಿಂದ ಮ್ಯಾನ್ಮಾರ್ ಗಡಿ ದೇಶವಾಗಿರುವ ಭಾರತದ ನವದೆಹಲಿಯಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಸಾಗಯಿಂಗ್ ನಗರದ ವಾಯುವ್ಯಕ್ಕೆ ಭೂಮಿಯ 10 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ತಕ್ಷಣಕ್ಕೆ ಯಾವುದೇ ಸಾವು ನೋವುಗಳ ವರದಿಯಾಗಿಲ್ಲ.
ಮ್ಯಾನ್ಮಾರ್ ನಲ್ಲಿ ಭೂಕಂಪ ಸಂಭವಿಸಿದ ಎಫೆಕ್ಟ್ ಬ್ಯಾಂಕಾಕ್ ಗೂ ತಟ್ಟಿದೆ. ಬ್ಯಾಂಕಾಕ್ ಹಾಗೂ ಥೈಲ್ಯಾಂಡ್ ನಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ. ಕಟ್ಟಡಗಳು ಅಲುಗಾಡಿವೆ, ಕೆಲವಡೆ ಮುಗಿಲೆತ್ತರದ ಕಟ್ಟಗಳು ಧ್ವಂಸವಾದ ದೃಶ್ಯಗಳು ಸೆರೆಯಾಗಿವೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಸಾಮಾಜಿಕ ಜಾಲತಾಣದಲ್ಲಿ ಭೂಕಂಪದ ತೀವ್ರತೆ ಬಗ್ಗೆ ಮಾಹಿತಿ ನೀಡಿದೆ.
ಬ್ಯಾಂಕಾಕ್ ನಲ್ಲಿ ಭೂಕಂಪದ ಅನುಭವವಾದ ನಂತರ ಕಟ್ಟಡದ ಮೇಲ್ಛಾವಣಿಯಲ್ಲಿದ್ದ ಟ್ಯಾಂಕ್ ನಿಂದ ನೀರು ಕೆಳಗೆ ಬೀಳುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ. ಜೊತೆಗೆ ಸ್ವಿಮ್ಮಿಂಗ್ ಪೂಲ್‌ನಲ್ಲಿರುವ ನೀರು ಚಿಮ್ಮಿ ಹೊರ ಚೆಲ್ಲುತ್ತಿದೆ. ಹೋಟೆಲ್ ನಲ್ಲಿ ವಸ್ತುಗಳೆಲ್ಲ ಅಲುಗಾಡುತ್ತಿರುವ ದೃಶ್ಯಗಳನ್ನು ಅಲ್ಲಿನ ಜನ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.