Home ಟಾಪ್ ಸುದ್ದಿಗಳು ಮಧ್ಯಪ್ರದೇಶದ ಆಸ್ಪತ್ರೆಯಲ್ಲಿ ಅಗ್ನಿ ದುರಂತ: ಕನಿಷ್ಠ 4 ರೋಗಿಗಳ ಸಾವು

ಮಧ್ಯಪ್ರದೇಶದ ಆಸ್ಪತ್ರೆಯಲ್ಲಿ ಅಗ್ನಿ ದುರಂತ: ಕನಿಷ್ಠ 4 ರೋಗಿಗಳ ಸಾವು

ಭೋಪಾಲ್: ಮಧ್ಯಪ್ರದೇಶದ ಜಬಲ್’ಪುರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಭಾರಿ ಬೆಂಕಿ ಅವಘಡ ನಡೆದಿದ್ದು, ಕನಿಷ್ಠ ನಾಲ್ಕು ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿವೆ.

ಘಟನಾ ಸ್ಥಳದ ಕಟ್ಟಡದಿಂದ ದೊಡ್ಡ ಪ್ರಮಾಣದಲ್ಲಿ ಹೊಗೆ ಬರುತ್ತಿರುವ ದೃಶ್ಯಾವಳಿಗಳನ್ನು ಮಾಧ್ಯಮಗಳು ವರದಿ ಮಾಡಿವೆ. ಸದ್ಯ ಆಸ್ಪತ್ರೆಯಿಂದ ರೋಗಿಗಳನ್ನು ಸ್ಥಳಾಂತರಿಸುವ ಪ್ರಯತ್ನಗಳು ಮುಂದುವರಿದಿದೆ ಎಂದು ಹೇಳಲಾಗಿದೆ.

ಜಬಲ್’ಪುರದ ದಾಮೋಹ್ ನಾಕಾ ಪ್ರದೇಶದ ಸಮೀಪದಲ್ಲಿರುವ ನ್ಯೂ ಲೈಫ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಬಹುಗುಣ ತಿಳಿಸಿದ್ದಾರೆ.

ಶಾರ್ಟ್ ಸರ್ಕ್ಯೂಟ್’ನಿಂದಾಗಿ ಬೆಂಕಿ ಅವಘಡ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Join Whatsapp
Exit mobile version