ಕೆಪಿಸಿಸಿಗೆ ಮೇಜರ್ ಸರ್ಜರಿ: 4 ಕಾರ್ಯಾಧ್ಯಕ್ಷರ ಬದಲಾವಣೆ, ಐವರು ಕಾರ್ಯಾಧ್ಯಕ್ಷರ ನೇಮಕ

Prasthutha|

ಬೆಂಗಳೂರು: ಕೆಪಿಸಿಸಿಗೆ ಮೇಜರ್ ಸರ್ಜರಿ ಮಾಡಲಾಗಿದೆ. 4 ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ. ಹೊಸದಾಗಿ ಐವರು ಕಾರ್ಯಾಧ್ಯಕ್ಷರನ್ನು ಎಐಸಿಸಿ ನೇಮಕ ಮಾಡಿದೆ.

- Advertisement -

ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ತನ್ವೀರ್ ಸೇಠ್, ಜಿ.ಸಿ.ಚಂದ್ರಶೇಖರ್​​ ವಿನಯ್ ಕುಲಕರ್ಣಿ, ಮಂಜುನಾಥ್ ಭಂಡಾರಿ, ವಸಂತ್ ಕುಮಾರ್ ನೇಮಕ ಮಾಡಲಾಗಿದೆ.

  • ಪ್ರಚಾರ ಸಮಿತಿ ಅಧ್ಯಕ್ಷರಾಗಿ ವಿನಯ್ ಕುಮಾರ್ ಸೊರಕೆ, ಪ್ರಚಾರ ಸಮಿತಿ ಕೋ ಚೇರ್ಮನ್ ಆಗಿ ಎಲ್‌.ಹನುಮಂತಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ರಿಜ್ವಾನ್ ಅರ್ಷದ್ ನೇಮಕವಾಗಿದ್ದಾರೆ.
  • ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವ ವಹಿಸಿದ್ದರು. ಸಚಿವರಾದ ಕೆ.ಜೆ.ಜಾರ್ಜ್‌, ಕೆ.ಹೆಚ್‌.ಮುನಿಯಪ್ಪ, ದಿನೇಶ್ ಗುಂಡೂರಾವ್​, ಕೃಷ್ಣ ಭೈರೇಗೌಡ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್‌, ಚಂದ್ರಪ್ಪ, ರಾಜ್ಯಸಭೆ ಸದಸ್ಯ ಜಿ.ಸಿ.ಚಂದ್ರಶೇಖರ್‌ ಮುಂತಾದವರು ಉಪಸ್ಥಿತರಿದ್ದರು.


Join Whatsapp