►ಗೂಳಿಹಟ್ಟಿ ಪ್ರಶ್ನೆಗೆ ಸಂತೋಷ್ ಉತ್ತರಿಸಲಿ
ಬೆಳಗಾವಿ: ಆರೆಸ್ಸೆಸ್ ಸರಸಂಘಚಾಲಕರಾಗಿ ದಲಿತರನ್ನು ಮಾಡಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.
ಬೆಳಗಾವಿ ಸುವರ್ಣ ಸೌಧದಲ್ಲಿ ಬುಧವಾರ ಮಾತನಾಡಿ ಅವರು, ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಸ್ಪಷ್ಟವಾದ ಪ್ರಶ್ನೆಯನ್ನು ಬಿಎಲ್ ಸಂತೋಷ್ ಗೆ ಕೇಳಿದ್ದಾರೆ. ಅದಕ್ಕೆ ಬಿಜೆಪಿ ನಾಯಕರು ಉತ್ತರ ಕೊಡಲಿ ಎಂದು ಆಗ್ರಹಿಸಿದ್ದಾರೆ.
ಆರ್ ಎಸ್ ಎಸ್ ಸಂಸ್ಥಾಪಕ ಹೆಡಗೇವಾರ್ ಮ್ಯೂಸಿಯಂಗೆ ದಲಿತ ಎಂಬ ಕಾರಣಕ್ಕಾಗಿ ಪ್ರವೇಶ ಕೊಟ್ಟಿಲ್ಲ ಎಂದು ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಎಂದಿದ್ದಾರೆ. ಅಲ್ಲದೆ ಈ ನಿಯಮ ಬಿಜೆಪಿಯ ದಲಿತ ನಾಯಕರಿಗೆ ಅನ್ವಯ ಆಗುತ್ತಾ? ಎಂದು ಕೇಳಿದ್ದಾರೆ.