ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಮಾಲಾಡಿ ಅಜಿತ್ ಕುಮಾರ್ ರೈ ಪುನರಾಯ್ಕೆ

Prasthutha|

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ಜಗತ್ತಿನಾದ್ಯಂತ ಸದಸ್ಯರನ್ನೊಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ 2022-2025 ರ ಸಾಲಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

- Advertisement -

ಅಜಿತ್ ಕುಮಾರ್ ರೈ ಬಂಟರ ಮಾತೃ ಸಂಘಕ್ಕೆ ಸತತವಾಗಿ ನಾಲ್ಕನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿದ್ದಾರೆ.

ಮುಂದಿನ ದಿನಗಳಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಮಹತ್ವಾಕಾಂಕ್ಷೆ ಯೋಜನೆಯಾದ ಶತಮಾನೋತ್ಸವ ಕಟ್ಟಡ ಸಂಕೀರ್ಣ, ವಿಶ್ವವ್ಯಾಪಿ ಸಮಾಜ ಬಾಂಧವರನ್ನು ಒಂದೇ ಸೂರಿನಡಿ ತರ ಬಯಸುವ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕೈ ಗೊಳ್ಳುವುದು ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ಮಾಲಾಡಿ ಅಜಿತ್ ಕುಮಾರ್ ರೈ ಹೇಳಿದರು.

- Advertisement -

ಮುಖ್ಯ ಚುನಾವಣಾಧಿಕಾರಿ ವಕೀಲರಾದ ಬಿ ಗುರುಪ್ರಸಾದ್ ಶೆಟ್ಟಿ ಅವರು ಅಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಉಪ ಚುನಾವಣಾಧಿಕಾರಿ ವಕೀಲರಾದ ಬಿಪಿನ್ ರೈ, ಹಾಗೂ ಚುನಾವಣಾಧಿಕಾರಿ ದಿವಾಕರ ಸಾಮಾನಿ ಚೇಳಾರ್ ಗುತ್ತು ಉಪಸ್ಥಿತರಿದ್ದರು.

Join Whatsapp
Exit mobile version