ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ

Prasthutha|

ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಅನಿಲ್ ಅರೋರಾ ಆತ್ಯಹತ್ಯೆ ಮಾಡಿಕೊಂಡಿದ್ದಾರೆ.

- Advertisement -


ಮುಂಬೈ ಬಾಂದ್ರಾದ ತಮ್ಮ ಮನೆಯ ಟೆರೇಸ್ ನಿಂದ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ.


ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಇಂದು ಬೆಳಗ್ಗೆ ತಮ್ಮ ಮನೆಯ 7ನೇ ಮಹಡಿಯಿಂದ ಬಿದ್ದು ಮಲೈಕಾ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -


ಅವರ ನಿವಾಸದ ಬಳಿ ಪೊಲೀಸರ ಜೊತೆ ನಟಿಯ ಮಾಜಿ ಪತಿ ಅರ್ಬಾಜ್ ಖಾನ್ ಕೂಡ ಭೇಟಿ ನೀಡಿದ್ದಾರೆ.


ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅನಿಲ್ ಅರೋರಾ ಅವರ ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡು ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



Join Whatsapp