ಹೊಸದಿಲ್ಲಿ: ಕರ್ನಾಟಕದಲ್ಲಿ ಹಿಜಾಬ್ ಧರಿಸುವ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶ ನಿರ್ಬಂಧಿಸಿರುವುದನ್ನು ಪಾಕಿಸ್ತಾನದ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕಿನ ಹೋರಾಟಗಾರ್ತಿ ಮಲಾಲ ಯೂಸುಫ್ ಝೈ ಖಂಡಿಸಿದ್ದಾರೆ.
“ಕಾಲೇಜು ನಮ್ಮನ್ನು ಶಿಕ್ಷಣ ಮತ್ತು ಹಿಜಾಬ್ ನಡುವೆ ಆಯ್ಕೆ ಮಾಡಲು ಒತ್ತಾಯಿಸುತ್ತಿದೆ” ಎಂಬ ವಿದ್ಯಾರ್ಥಿನಿಯೊಬ್ಬಳ ಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ ಮಲಾಲ, ಹೆಣ್ಣುಮಕ್ಕಳನ್ನು ಹಿಜಾಬ್ ಧರಿಸಿ ಶಾಲೆಗೆ ಹೋಗಲು ನಿರಾಕರಿಸುವುದು ಭಯಾನಕ ಸಂಗತಿಯಾಗಿದೆ. ಮಹಿಳೆಯರಿಗೆ ನಿರ್ಬಂಧಗಳು ಮುಂದುವರಿಯುತ್ತಿವೆ. ಹೆಚ್ಚು ಅಥವಾ ಕಡಿಮೆ ಬಟ್ಟೆ ಧರಿಸುವ ವಿಚಾರವಾಗಿ ಮುಸ್ಲಿಂ ಮಹಿಳೆಯರನ್ನು ಕಡೆಗಣಿಸುವುದನ್ನು ಭಾರತೀಯ ನಾಯಕರು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.