ಮಳಲಿ ಮಸೀದಿ ವಿಚಾರ: ದ.ಕ ಜಿಲ್ಲಾಧಿಕಾರಿ ಹೇಳಿದ್ದೇನು ?

Prasthutha|

ಮಂಗಳೂರು: ಮಳಲಿ ಮಸೀದಿಯ ವಿವಾದ ಕುರಿತಾಗಿ ಅಧಿಕಾರಿಗಳು ಮತ್ತು ವಿವಾದಕ್ಕೆ ಸಂಬಂಧಿಸಿದವರ ಜೊತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಇಂದು ಸಭೆ ನಡೆಸಿದ್ದಾರೆ.

- Advertisement -

ಸಭೆ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ, ಈ ವಿಚಾರದಲ್ಲಿ ವಿವಿಧ ಸಂಘಟನೆಗಳು ಜಿಲ್ಲಾಡಳಿತಕ್ಕೆ ಮನವಿ ನೀಡಿದ್ದವು. ನವೀಕರಣ ಕಾಮಗಾರಿಗೆ ತಾತ್ಕಾಲಿಕ ನ್ಯಾಯಾಲಯ ತಡೆಯಾಜ್ಞೆ ನೀಡಿ, ಯಾವುದೇ ಕಾಮಗಾರಿ ನಡೆಸದಂತೆ ಆದೇಶಿಸಿದೆ. ಅಧಿಕಾರಿಗಳು, ಜುಮ್ಮಾ ಮಸೀದಿ ಅಧ್ಯಕ್ಷ,ಕಾರ್ಯದರ್ಶಿಗಳ ಜೊತೆ ಇಂದು ಸಭೆ ನಡೆಸಿದ್ದೇವೆ ಎಂದು ಹೇಳಿದರು.


ಸಭೆಯಲ್ಲಿ ಎಲ್ಲರೂ ಕಾನೂನು ಪ್ರಕ್ರಿಯೆಗೆ ಒಪ್ಪಿಗೆ ಸೂಚಿಸಿದ್ದು, ನ್ಯಾಯಾಲಯದ ಆದೇಶ ಪಾಲನೆ ಮಾಡುವುದಾಗಿ ಎಲ್ಲರೂ ತಿಳಿಸಿದ್ದಾರೆ. ನ್ಯಾಯಾಲಯದಲ್ಲಿ ಹೋರಾಟ ಮಾಡುವುದಾಗಿ ಅವರು ಸಭೆಯಲ್ಲಿ ತಿಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದರು.

- Advertisement -

ತಾಂಬೂಲ ಪ್ರಶ್ನೆ ಇನ್ನಿತರ ವಿಚಾರ ಅವರವರ ವೈಯಕ್ತಿಕ ವಿಚಾರವಾಗಿದೆ. ಕಾನೂನು ಮೂಲಕವೇ ಹೋರಾಟ ಮಾಡಬೇಕಾಗಿದೆ ಎಂಬುವುದನ್ನು ಮನವರಿಕೆ ಮಾಡಲಾಗಿದೆ.ಯಾರು ಕೂಡ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಬಾರದು ಎಂದ ಡಾ.ರಾಜೇಂದ್ರ ಕೆ.ವಿ., ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲರೂ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.



Join Whatsapp