ಮಂಗಳೂರು: ಮಳಲಿ ಮಸೀದಿ ಪ್ರಕರಣದ ತೀರ್ಪನ್ನು ಮತ್ತೆ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ಕೋರ್ಟ್ ಮುಂದೂಡಿದ್ದು, ನವೆಂಬರ್ 9ರಂದು ತೀರ್ಪು ಪ್ರಕಟಿಸಲಿದೆ.
2022ರ ಏಪ್ರಿಲ್ ನಲ್ಲಿ ಮಳಲಿ ಮಸೀದಿ ನವೀಕರಣದ ವೇಳೆ ಕಟ್ಟಡ ಕೆಡವಿದ ಸಂದರ್ಭ ಹಿಂದೂ ಶೈಲಿಯ ಮರದ ಕೆತ್ತನೆ ಪತ್ತೆ ಆಗಿತ್ತು ಎಂದು ಆರೋಪಿಸಿ ಸಂಘಪರಿವಾರ ಸಂಘಟನೆಗಳು ಗುಲ್ಲೆಬ್ಬಿಸಿ, ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದವು.
ಮಸೀದಿ ಪರ ವಕೀಲರು ವಾದ ಮಂಡಿಸಿ, ಮಸೀದಿ ವಕ್ಫ್ ಆಸ್ತಿಯಾಗಿದ್ದು, ವಕ್ಫ್ ಸಂಬಂಧಿತ ನ್ಯಾಯಾಲಯದ ಪರಿಧಿಗೆ ಇದು ಬರುತ್ತದೆ. ಹಾಗಾಗಿ ಮಸೀದಿ ವಿರುದ್ಧದ ಪ್ರಕರಣ ರದ್ದುಗೊಳಿಸಬೇಕು ಎಂದು ವಾದಿಸಿದ್ದರು.