ಮಳಲಿ ಮಸೀದಿ ವಿಚಾರಣೆ ಆ.1ಕ್ಕೆ ಮುಂದೂಡಿಕೆ

Prasthutha|

ಮಂಗಳೂರು: ಮಳಲಿ ಮಸೀದಿ ವಿಚಾರಣೆಯನ್ನು ಮಂಗಳೂರು ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಆಗಸ್ಟ್ 1ಕ್ಕೆ ಮುಂದೂಡಿದೆ.

- Advertisement -


ಸಿವಿಲ್ ನ್ಯಾಯಾಲಯ ತೀರ್ಪು ಪ್ರಕಟಿಸದಂತೆ ಸ್ಥಳೀಯರಾದ ಮನೋಜ್ ಕುಮಾರ್ ಧನಂಜಯ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದ್ದ ಪ್ರತಿಯನ್ನು ಮಸೀದಿ ಪರ ವಕೀಲರು ಇಂದು ಸಿವಿಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.


ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನ ಆದೇಶ ಪ್ರತಿಯನ್ನು ಸ್ವೀಕರಿಸಿದ ಮಂಗಳೂರು ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ವಿಚಾರಣೆಯನ್ನು ಆಗಸ್ಟ್ 1ಕ್ಕೆ ಮುಂದೂಡಿದೆ.



Join Whatsapp