ಬೆಂಗಳೂರು: ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಕಮಿಷನರ್ ನೇಮಿಸಿ ಸ್ಥಳ ಪರಿಶೀಲನೆಗೆ ಅವಕಾಶ ಮಾಡಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿಯಲ್ಲೂ ಕಮಿಷನರ್ ನೇಮಕಕ್ಕೆ ಅರ್ಜಿಪರ ವಕೀಲ ವಿವೇಕ್ ಸುಬ್ಬಾರೆಡ್ಡಿ ಆಗ್ರಹಿಸಿದ್ದಾರೆ.
ಆ ಕುರಿತಂತೆ ನ್ಯಾಯವಾದಿ ಸುಬ್ಬಾರೆಡ್ಡಿ ಬುಧವಾರ ಹೈಕೋರ್ಟ್ ಮುಂದೆ ವಾದ ಮಂಡಿಸಿದ್ದಾರೆ. ಮಂಗಳೂರಿನ ಧನಂಜಯ್ ಹಾಗೂ ಮನೋಜ್ ಕುಮಾರ್ ಸಲ್ಲಿಸಿರುವ ರ‍್ಜಿ ಕುರಿತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಾದಿಸಿದ ವಿವೇಕ್ ಸುಬ್ಬಾರೆಡ್ಡಿ, ಮಸೀದಿಯ ಒಳಗೆ ದೇವಾಲಯವಿತ್ತೋ, ಇಲ್ಲವೋ ಎಂಬ ಕುರಿತ ಸಾಕ್ಷ್ಯಾಧಾರಗಳನ್ನು ಸ್ಥಳ ಸಮೀಕ್ಷೆ ನಡೆಸಿಯೇ ಸಂಗ್ರಹಿಸಬೇಕಿದೆ. ಅದಕ್ಕಾಗಿ ಮಳಲಿ ಮಸೀದಿಯ ಪರಿಶೀಲನೆಗೆ ಕಮಿಷನರ್ ನೇಮಕ ಮಾಡುವ ಅಗತ್ಯವಿದೆ ಎಂದಿದ್ದಾರೆ.