ಕೊಚ್ಚಿ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ಹಾಗೂ ನಿರ್ಮಾಪಕ ವಿಜಯ್ ಬಾಬು ಅವರನ್ನು ಸೋಮವಾರ ಬಂಧಿಸಲಾಗಿದೆ.
ಎರ್ನಾಕುಲಂ ಟೌನ್ ಸೌತ್ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದಾಗ ಅವರನ್ನು ಬಂಧಿಸಲಾಗಿದೆ.
ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿರುವುದರಿಂದ ಅವರು ಶೀಘ್ರದಲ್ಲೇ ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆಯಾಗುವ ನಿರೀಕ್ಷೆಯಿದೆ.
ಎರ್ನಾಕುಲಂ ಟೌನ್ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಬೆಳಿಗ್ಗೆ 9.00 ಗಂಟೆಗೆ ವಿಜಯ್ ಬಾಬು ತನಿಖಾಧಿಕಾರಿಗಳ ಮುಂದೆ ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ವಿಚಾರಣೆಗೆ ಹಾಜರಾಗಿದ್ದರು.
ತನಿಖೆಗೆ ಸಹಕರಿಸುವಂತೆ ಮತ್ತು ತನಿಖೆಗೆ ಅಡ್ಡಿಪಡಿಸದಂತೆ ನ್ಯಾಯಾಲಯವು ವಿಜಯ್ ಬಾಬು ಅವರಿಗೆ ನಿರ್ದೇಶನ ನೀಡಿತ್ತು.